ಪುಣೆ: ಬಾರಕೂರು ಮಹಾಸಂಸ್ಥಾನದ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಪುಣೆ ಭಕ್ತಾದಿಗಳ ಅಪೇಕ್ಷೆಯಂತೆ ಪುಣೆ ಬಂಟರ ಸಂಘದ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಪಿಂಪ್ರಿ ಚಿಂಚಾÌಡ್ ಬಂಟರ ಸಂಘ ಹಾಗೂ ಬಂಟ್ಸ… ಅಸೋಸಿಯೇಶನ್ ಪುಣೆ ಸಹಕಾರದೊಂದಿಗೆ ಸೆ. 3 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ, ಬಾಣೇರ್ ಇಲ್ಲಿನ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಂಭ್ರಮವು ಸಾವಿರಾರು ಭಕ್ತಾದಿಗಳ ಉಪಸ್ಥಿತಿಯಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಸೇರಿದ್ದ ಅಸಂಖ್ಯ ಭಕ್ತಜನರ ಶ್ರೀನಿವಾಸ ಗೋವಿಂದಾ , ವೆಂಕಟರಮಣ ಗೋವಿಂದಾ ಎನ್ನುವ ಮುಗಿಲುಮುಟ್ಟುವ ವೇದ ಘೋಷದೊಂದಿಗೆ, ಮಹಾಪೂಜೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಪುಣೆಯಲ್ಲಿ ಪ್ರಪ್ರಥಮ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನಗೊಂಡು ಭಕ್ತ ಜನರು ಪುಳಕಿತಗೊಂಡರು.
ಬಾಕೂìರು ಮಹಾಸಂಸ್ಥಾನದ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಈ ಭವ್ಯ ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಓಣಿಮಜಲು ಜಗನ್ನಾಥ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು, ಬಾಕೂìರು ಮಹಾಸಂಸ್ಥಾನದ ಮುಂಬಯಿ ಘಟಕದ ಅಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿ, ಬಾಕೂìರು ಮಹಾಸಂಸ್ಥಾನದ ವಿಶ್ವಸ್ಥರಾದ ಕೆ. ಎಂ. ಶೆಟ್ಟಿ, ಬಂಟ್ಸ್ ಅಸೋಸಿಯೇಶನ್ ಪುಣೆ ಅಧ್ಯಕ್ಷ ನಾರಾಯಣ ಕೆ. ಶೆಟ್ಟಿ , ಪಿಂಪ್ರಿ-ಚಿಂಚಾÌಡ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಎರ್ಮಾಳ್ ನಾರಾಯಣ ಕೆ. ಶೆಟ್ಟಿ, ಎರ್ಮಾಳ್ ವಿಶ್ವನಾಥ ಶೆಟ್ಟಿ, ವಿಠಲ್ ಶೆಟ್ಟಿ ಮತ್ತಿತರ ಆಹ್ವಾನಿತ ಗಣ್ಯರು, ಪುಣೆ ಬಂಟರ ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿ ಪದಾಧಿಕಾರಿಗಳು ಪಿಂಪ್ರಿ-ಚಿಂಚಾÌಡ್ ಬಂಟರ ಸಂಘದ ಪದಾಧಿಕಾರಿಗಳು, ಬಂಟ್ಸ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ಕಲ್ಯಾಣೋತ್ಸವದ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಂಡರು.
ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಶಮ್ಮಿ ಎ. ಹೆಗ್ಡೆ ದಂಪತಿ, ಗೌರವ ಕೋಶಾಧಿಕಾರಿ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಸಾರಿಕಾ ಸಿ. ಶೆಟ್ಟಿ ದಂಪತಿ, ಪದಾಧಿಕಾರಿ ವಿಶ್ವನಾಥ್ ಶೆಟ್ಟಿ, ಸಂಧ್ಯಾ ವಿ. ಶೆಟ್ಟಿ ದಂಪತಿ ಕಲ್ಯಾಣೋತ್ಸವದ ಸುಪ್ರಭಾತ ಸೇವೆ, ಅಭಿಷೇಕ ಸೇವೆ ಸೇರಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬೆಳಗ್ಗೆ ಅಭಿಷೇಕಗಳನ್ನು ನಡೆಸಿ ಶ್ರೀನಿವಾಸ ದೇವರ ಪಲ್ಲಕಿ ಮೆರವಣಿಗೆಯನ್ನು ಭವನದ ಆವರಣದಲ್ಲಿ ನಡೆಸಿ ಶಶಿಕಿರಣ್ ಶೆಟ್ಟಿ ಚಾವಡಿಯಲ್ಲಿ ದೇವರ ಮಂಟಪದೆದುರಲ್ಲಿ ಶ್ರೀನಿವಾಸ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಬೆಂಗಳೂರಿನಿಂದ ಆಗಮಿಸಿದ ಅರ್ಚಕ ವೃಂದ ವಿವಿಧ ಶ್ರೀನಿವಾಸ ದೇವರ ಭವ್ಯ ಮಂಟಪವನ್ನು ರಚಿಸಿ ವಿವಿಧ ಪೂಜಾದಿ ಕಾರ್ಯಕ್ರಮಗಳನ್ನು ನಡೆಸಿದರು. ಶ್ರೀನಿವಾಸ-ಪದ್ಮಾವತಿಯ ನಿಶ್ಚಿತಾರ್ಥ, ತಾಂಬೂಲಾದಿ ಕ್ರಮಗಳು, ಮಾಂಗಲ್ಯಧಾರಣೆ ನಡೆಯಿತು. ಚೆಂಡೆ, ವಾದ್ಯಗಳು, ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷವಾಗಿ ತೊಟ್ಟಿಲ ಪೂಜೆಗಳು ನಡೆದವು. ಪುಣೆ ಬಂಟರ ಸಂಘದ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು ಮತ್ತು ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ನಿಟ್ಟೆ ಅವರ ನೇತೃತ್ವದಲ್ಲಿ ಅಚ್ಚುಕಟ್ಟಿನ ಕಾರ್ಯಕ್ರಮವನ್ನು ಸಂಘಟಿಸಲಾಯಿತು.
ಚಿತ್ರ-ವರದಿ:ಕಿರಣ್ ಬಿ ರೈ ಕರ್ನೂರು