ಪುಣೆ: ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ಸಮಾಜ ಬಾಂಧವರ ಮಹಿಳೆಯರಿಗಾಗಿ ಆಯೋಜಿಸಿದ ಅರಸಿನ ಕುಂಕುಮ ಕಾರ್ಯಕ್ರಮವು ಜ. 15 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಬಂಟರ ಭವನದಲ್ಲಿ ನಡೆಯಿತು.
ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಭವನದ ಶಶಿಕಿರಣ್ ಶೆಟ್ಟಿ ಚಾವಡಿಯಲ್ಲಿ ದೇವರ ಮಂಟಪದ ಎದುರು ದೀಪ ಪ್ರಜ್ವಲಿಸಿ ಆರಂಭಿಸಲಾಯಿತು. ಅತಿಥಿಗಳಾಗಿ ಸಮಾಜ ಸೇವಕಿ ಪುಷ್ಪಾ ಹೆಗ್ಡೆ ಹಾಗೂ ಚಂದ್ರಕಲಾ ಶೆಟ್ಟಿ ಉಪಸ್ಥಿತರಿದ್ದರು. ಮಹಿಳಾ ವಿಭಾಗದ ಸದಸ್ಯರು ದೇವರಿಗೆ ಆರತಿ ಬೆಳಗಿ ಪ್ರಾರ್ಥಿಸಿ ಸೇರಿದ್ದ ಮಹಿಳೆಯರಿಗೆ ಅರಸಿನ ಕುಂಕುಮ ಹಚ್ಚಿ, ನೆನಪಿನ ಕಾಣಿಕೆಗಳನ್ನು ನೀಡಿ ಶುಭವನ್ನು ಹಾರೈಸಿದರು.
ಈ ಸಂದರ್ಭ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯದರ್ಶಿ ಸುಚಿತ್ರಾ ಶ್ರೀನಿವಾಸ್ ಶೆಟ್ಟಿ, ಕೋಶಾಧಿಕಾರಿ ಶಮ್ಮಿ ಅಜಿತ್ ಹೆಗ್ಡೆ, ಸಾಂಸ್ಕೃತಿಕ ಸಮಿತಿ ಕಾರ್ಯಧ್ಯಕ್ಷೆ ದಿವ್ಯಾ ಸಂತೋಷ್ ಶೆಟ್ಟಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷೆ ಸಾರಿಕಾ ಚಂದ್ರಹಾಸ ಶೆಟ್ಟಿ, ಶಿಕ್ಷಣ ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷೆ ಸಂಧ್ಯಾ ರಾಮಕೃಷ್ಣ ಶೆಟ್ಟಿ, ನೀನಾ ಬಾಲಕೃಷ್ಣ ಶೆಟ್ಟಿ, ನಯನಾ ಜಯ ಶೆಟ್ಟಿ, ನಿವೇದಿತಾ ಸುಧಾಕರ್ ಶೆಟ್ಟಿ, ವಿನಯಾ ಉಮಾನಾಥ ಶೆಟ್ಟಿ ಹಾಗೂ ಗೀತಾ ಜಯ ಶೆಟ್ಟಿ, ವೀಣಾ ಪ್ರಶಾಂತ್ ಶೆಟ್ಟಿ, ಗೀತಾ ರತ್ನಾಕರ್ ಶೆಟ್ಟಿ ಹಾಗೂ ಆಶಾ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಎಸ್. ಶೆಟ್ಟಿ ಹಾಗೂ ದಕ್ಷಿಣ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಂಬಿಕಾ ವಿ. ಶೆಟ್ಟಿ ಉಪಸ್ಥಿತರಿದ್ದರು. ಮನೋರಂಜನೆಯ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಹಾಗೂ ಲಾವಣಿ ನೃತ್ಯವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಚಿತ್ರ-ವರದಿ :ಕಿರಣ್ ಬಿ. ರೈ ಕರ್ನೂರು