ಪುಣೆ: ದಿನಕ್ಕೊಂದು ತಿರುವು ಪಡೆಯುತ್ತಿರುವ ಪುಣೆಯ ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇದೀಗ ಮತ್ತೊಂದು ಮಹತ್ತರ ಅಂಶ ಬೆಳಕಿಗೆ ಬಂದಿದೆ.
ಅಪಘಾತ ನಡೆಸಿದ ಬಾಲಕ ಮದ್ಯಯಾ ಅಮಲಿನಲ್ಲಿದ್ದ ಎಂಬುದನ್ನು ಪತ್ತೆಹಚ್ಚಲು ಬಾಲಕನ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಈ ನಡುವೆ ಇಬ್ಬರು ವೈದ್ಯರು ಬಾಲಕನ ರಕ್ತದ ಮಾದರಿಯನ್ನು ಕಸದ ಬುಟ್ಟಿಗೆ ಎಸೆದು ಅದರ ಬದಲಿಗೆ ಬೇರೆಯೊಬ್ಬರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟ ಆರೋಪದ ಮೇಲೆ ಇಬ್ಬರು ವೈದ್ಯರನ್ನು ಬಂಧಿಸಲಾಗಿತ್ತು, ಪೋಲೀಸರ ವಶದಲ್ಲಿರುವ ವೈದ್ಯರನ್ನು ವಿಚಾರಣೆ ನಡೆಸಿದ ವೇಳೆ ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಲು ಬರೋಬ್ಬರಿ ಮೂರೂ ಲಕ್ಷ ರೂಪಾಯಿ ಪಡೆದುಕೊಂಡಿದ್ದರು ಎಂಬ ಅಂಶ ಪೊಲೀಸರ ವಶದಲ್ಲಿರುವ ವೈದ್ಯರು ಹೊರಹಾಕಿದ್ದಾರೆ.
ಅಪ್ರಾಪ್ತ ಬಾಲಕನನ್ನು ಪ್ರಕರಣದಿಂದ ಪಾರು ಮಾಡಲು ಬಾಲಕನ ಕುಟುಂಬ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸಿದ್ದು ಇದೀಗ ಒಂದೊಂದೇ ವಿಚಾರ ಹೊರಬರುತ್ತಿದೆ.
ಘಟನೆ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಮಾತನಾಡಿದ ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸುವಲ್ಲಿ ಆಸ್ಪತ್ರೆಯ ವೈದ್ಯರು ಭಾಗಿಯಾಗಿದ್ದು ಇದೀಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು ಆರೋಪಿಗಳು ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಲು ಮೂರೂ ಲಕ್ಷ ರೂಪಾಯಿ ಪಡೆದುಕೊಂಡಿದ್ದರು ಎಂದು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.
ಮೇ 19 ರ ಮುಂಜಾನೆ ಅಪ್ರಾಪ್ತ ಬಾಲಕನೊಬ್ಬ ಚಲಾಯಿಸುತ್ತಿದ್ದ ಎನ್ನಲಾದ ಪೋರ್ಶೆ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು. ಅಪಘಾತದ ಸಮಯದಲ್ಲಿ ಕಾರು ಚಲಾಯಿಸುತ್ತಿದ್ದ ಬಾಲಕ ಕುಡಿದಿದ್ದರು ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರಂಭದಲ್ಲಿ ಜುವೆನೈಲ್ ಜಸ್ಟಿಸ್ ಬೋರ್ಡ್ ಬಾಲಕನಿಗೆ ಜಾಮೀನು ನೀಡಿತು, ಆದರೆ ಪ್ರಕರಣದ ಕುರಿತು ಆಕ್ರೋಶ ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ ಜಾಮೀನು ಆದೇಶ ಹಿಂಪಡೆದು ಮತ್ತೆ ಬಂಧನದಲ್ಲಿರಿಸಿದೆ.
ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಬಾಲಕನ ತಂದೆ ಹಾಗೂ ಅಜ್ಜನನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Arrested: ಲಿವ್ ಇನ್ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್ ಅಧಿಕಾರಿ ಬಂಧನ