Advertisement

ಪುಣೆ ರೈಲ್ವೆ ನಿಲ್ದಾಣದಲ್ಲಿ ಗ್ರೆನೇಡ್ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆ: ಬಿಗಿ ಭದ್ರತೆ

12:31 PM Nov 03, 2019 | Mithun PG |

ಪುಣೆ: ಹ್ಯಾಂಡ್ ಗ್ರೆನೇಡ್ ಮಾದರಿಯ ಅನುಮಾನಾಸ್ಪದ ವಸ್ತುವೊಂದು ಪುಣೆಯ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

Advertisement

ಅನುಮಾನಸ್ಪದ ವಸ್ತು ಪತ್ತೆಯಾದ ಕೂಡಲೇ ರೈಲ್ವೇ ಪೊಲೀಸರು ಸ್ಥಳೀಯ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆಗಮಿಸಿದ ಬಾಂಬ್ ನಿಷ್ಕ್ರೀಯ ದಳ ಗ್ರೆನೇಡ್ ಮಾದರಿಯ ವಸ್ತುವನ್ನು ನಾಶಪಡಿಸಿದೆ ಮತ್ತು ಅದರ ಭಾಗಗಳನ್ನು ವಿಧಿ ವಿಜ್ಞಾನ ಇಲಾಖೆಗೆ ರವಾನಿಸಿದೆ.

ಶುಕ್ರವಾರ ಮುಂಜಾನೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮೂರರಲ್ಲಿ  ಕೂಡ ಇದೇ ಮಾದರಿಯ ಅನುಮಾನಾಸಸ್ಪದ ವಸ್ತು ಪತ್ತೆಯಾಗಿತ್ತು. ಆ ವೇಳೆ ಬಾಂಬ್ ನಿಷ್ಕ್ರೀಯ ದಳ ಮತ್ತು ಶ್ವಾನ ದಳ ಆಗಮಿಸಿ ತೀವ್ರ ಶೋಧ ಕಾರ್ಯ ನಡೆಸುವುದರ ಜೊತೆಗೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ತನಿಖೆಯೆ ನಂತರ ಬ್ಯಾಗ್ ನಲ್ಲಿದ್ದ ಅನುಮಾನಸ್ಪದ ವಸ್ತು ಆರ್ ಡಿ ಎಕ್ಸ್ ಎಂದು ಪತ್ತೆ ಹಚ್ಚಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next