ಪುಣೆ: 2018ರ ಜನವರಿಯಲ್ಲಿ ಪರ್ಯಾಯ ಪೀಠವನ್ನೇರಲಿರುವ ಉಡುಪಿಯ ಪಲಿಮಾರು ಮಠದ ಪರಮಪೂಜ್ಯ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯ ಅವರನ್ನು ಪುಣೆಯಲ್ಲಿರುವ ಸಮಸ್ತ ತುಳು ಕನ್ನಡಿಗರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪುಣೆ ಕನ್ನಡ ಸಂಘ, ಬಂಟರ ಸಂಘ ಹಾಗೂ ಕರ್ನಾಟಕ ಸಂಘದ ಸಂಯುಕ್ತ ಆಶ್ರಯದಲ್ಲಿ ಅ. 2ರಂದು ಕನ್ನಡ ಸಂಘ ಪುಣೆಯ ಗಣೇಶ ನಗರದಲ್ಲಿರುವ ಶಕುಂತಳಾ ಜಗನ್ನಾಥ್ ಶೆಟ್ಟಿ ಸಭಾಗೃಹದಲ್ಲಿ ಸಾರ್ವಜನಿಕವಾಗಿ ಸಮ್ಮಾನಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರಾರಂಭದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಶುಭಾರಂಭಗೈದರು. ಪುಣೆ ಕನ್ನಡ ಸಂಘದ ಅಧ್ಯಕ್ಷ ಕುಶಲ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು, ಉಪಾಧ್ಯಕ್ಷ ರಾಮಕೃಷ್ಣ ಶೆಟ್ಟಿ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಪುಣೆ ಕನ್ನಡ ಸಂಘದ ಉಪಾಧ್ಯಕ್ಷರಾದ ಇಂದಿರಾ ಸಾಲ್ಯಾನ್, ನಾರಾಯಣ ಹೆಗಡೆ ಅವರು ಉಪಸ್ಥಿತರಿದ್ದರು.
ಅನಂತರ ಸ್ವಾಮೀಜಿ ಅವರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಿತು. ಮೊದಲಿಗೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಚಿತ್ರಾ ಜೋಶಿ ಬಳಗದಿಂದ ಭರತನಾಟ್ಯ ಕಾರ್ಯಕ್ರಮ, ಮೇಘಾ ಹಾಗೂ ಮೇಧಾ ಇವರಿಂದ ಕಥಕ್ ನೃತ್ಯ ನಡೆಯಿತು. ಸಂತೋಷ್ ಶೆಟ್ಟಿ ಅವರು ಸ್ವಾಗತಿಸಿದರು.
ಇಂದಿರಾ ಸಾಲ್ಯಾನ್ ವಂದಿಸಿದರು. ಪುಣೆಯ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಸೇವಕರು, ದಾನಿಗಳು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ :ಕಿರಣ್ ಬಿ. ರೈ ಕರ್ನೂರು