ಪುಣೆ: ಪುಣೆ ತುಳುಕೂಟ ಯುವ ವಿಭಾಗದ ವತಿಯಿಂದ ಸೂಪರ್ ಸೆವೆನ್ ಬಾಕ್ಸ್ ಕ್ರಿಕೆಟ್ ಎ. 1 ರಂದು ಸೆಂಟ್ರಲ್ ಮಾಲ್ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾರಂಭಗೊಂಡಿತು.
ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು ಇವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸುಮೀರಾ ಫುಡ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಅಭಿಜಿತ್ ಕಾಳೆ ಅವರು ಬ್ಯಾಟಿಂಗ್ ಮಾಡುವುದರ ಮೂಲಕ ಪಂದ್ಯಾ ವಳಿಗೆ ಚಾಲನೆ ನೀಡಿದರು.
ಸುಮೀರಾ ಫುಡ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ನರಸಿಂಹ ದೇವಾಡಿಗ, ಪುಣೆ ತುಳುಕೂಟದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಗೌರವಾಧ್ಯಕ್ಷ ಮಿಯ್ನಾರು ರಾಜ್ ಕುಮಾರ್ ಎಂ. ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಎಣ್ಣೆಹೊಳೆ, ಶಿಕ್ಷಣ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಮಾಣಿಬೆಟ್ಟು, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿಲ್ಮಾ ಮಾರ್ಟಿಸ್, ಅಂತಾರಾಷ್ಟ್ರೀಯ ಮಹಿಳಾ ಅಸೋಸಿಯೇಟ್ಸ್ ಕಾರ್ಯಾಧ್ಯಕ್ಷೆ ಗೀತಾ ಬಿ. ಶೆಟ್ಟಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು. ವಿವಿಧೆಡೆಗಳ ಕ್ರಿಕೆಟ್ ತಂಡಗಳ ಆಟಗಾರರು, ಕ್ರಿಕೆಟ್ ಪ್ರೇಮಿಗಳು, ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರ -ವರದಿ : ಕಿರಣ್ ಬಿ. ರೈ ಕರ್ನೂರು