ಪುಣೆ: ಪುಣೆ ತುಳುಕೂಟದ 21ನೇ ವಾರ್ಷಿಕೋತ್ಸವ ಸಮಾರಂ ಭವು ಆ. 15ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಈ ಸಂದರ್ಭ ಮುಖ್ಯ ಅತಿಥಿ ಗಳಾಗಿ ಉಪಸ್ಥಿತರಿದ್ದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ್ ಶೆಟ್ಟಿ ಬೆಳ್ಳಾರೆ, ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಬಂಟ್ವಾಳ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ| ತುಕಾರಾಮ ಪೂಜಾರಿ ಹಾಗೂ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಇವರುಗಳನ್ನು ಸಂಘದ ವತಿಯಿಂದ ಅಧ್ಯಕ್ಷರಾದ ತಾರಾನಾಥ ಕೆ. ರೈ ಮೇಗಿನಗುತ್ತು ಇವರು ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುತ್ಛವನ್ನಿತ್ತು ಸಮ್ಮಾನಿಸಿದರು.
ಪಿಂಪ್ರಿ ಚಿಂಚಾÌಡ್ ಪರಿಸರದ ಖ್ಯಾತ ಉದ್ಯಮಿ, ಸಮಾಜ ಸೇವಕ, ಪಿಂಪ್ರಿ-ಚಿಂಚಾÌಡ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ ಹಾಗೂ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ಅಂಗ ವೈಫಲ್ಯತೆಗೀಡಾಗಿ ನಿವೃತ್ತಿಯಾದ ಯೋಧ ಶ್ಯಾಮರಾಜ್ ಎಡನೀರು ಇವರುಗಳನ್ನು ಸಂಘದ ವತಿಯಿಂದ ವರ್ಷದ ಸಾಧಕರನ್ನಾಗಿ ವಿಶೇಷವಾಗಿ ಸಂಘದ ವತಿಯಿಂದ ಸಮ್ಮಾನಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಗೌರವಾಧ್ಯಕ್ಷ ಮಿಯ್ನಾರು ರಾಜ್ ಕುಮಾರ್ ಎಂ. ಶೆಟ್ಟಿ, ಉಪಾಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ, ಪ್ರಧಾನ ಕಾರ್ಯದರ್ಶಿ ಕಿರಣ್ ಬಿ. ರೈ ಕರ್ನೂರು, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಎಣ್ಣೆಹೊಳೆ, ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್ ಪಿ. ಶೆಟ್ಟಿ, ಪಿಂಪ್ರಿ-ಚಿಂಚಾÌಡ್ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮ್ ಸುವರ್ಣ ಉಪಸ್ಥಿತರಿದ್ದರು.
ನವಿತಾ ಎಸ್. ಪೂಜಾರಿ, ಗೀತಾ ಡಿ. ಪೂಜಾರಿ, ಸರಸ್ವತಿ ಸಿ. ಕುಲಾಲ್ ಪ್ರಾರ್ಥಿಸಿದರು. ಸಂತೋಷ್ ಶೆಟ್ಟಿ, ವಿಕೇಶ್ ರೈ ಶೇಣಿ ಅತಿಥಿಗಳನ್ನು ಪರಿಚಯಿಸಿದರು. ಶರತ್ ಶೆಟ್ಟಿ ಉಳೆಪಾಡಿ, ಪ್ರಿಯಾ ಎಚ್. ದೇವಾಡಿಗ ಸಮ್ಮಾನ ಪತ್ರ ವಾಚಿಸಿದರು. ಯುವ ವಿಭಾಗದ ಸದಸ್ಯ ರತನ್ ಸಾಲ್ಯಾನ್ ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳ ವರದಿಯನ್ನು ವಾಚಿಸಿದರು. ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಮಾಣಿಬೆಟ್ಟು ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮ ವನ್ನು ನಡೆಸಿಕೊಟ್ಟರು. ಕಾಂತಿ ಸೀತಾರಾಮ ಶೆಟ್ಟಿ ನಿರೂಪಿಸಿದರು.