ಪುಣೆ: ಪುಣೆ ತುಳುಕೂಟದ 20ನೇ ವಾರ್ಷಿಕೋತ್ಸವ ಸಮಾರಂಭವು ಆ. 15 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಗರದ ಮಹಾಲಕ್ಷ್ಮೀ ಲಾನ್ಸ್‌ನಲ್ಲಿ ಸಂಘದ ಅಧ್ಯಕ್ಷ ತಾರಾನಾಥ ಕೆ ರೈ ಮೇಗಿನಗುತ್ತು ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಸಮಾರಂಭದಲ್ಲಿ ಅತಿಥಿ-ಗಣ್ಯರು ಯುವ ವಿಭಾಗಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮುನಿಯಾಲ್ ಉದಯ ಕೃಷ್ಣಯ್ಯ ಚಾರಿಟೇಬಲಟ್ರಸ್ಟ್‌ನ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮುನಿಯಾಲು, ಗೌರವ ಅತಿಥಿಯಾಗಿ ಪಾಲ್ಗೊಂಡ ಉದಯವಾಣಿ ಪತ್ರಿಕೆಯ ಮಂಗಳೂರಿನ ಸುದ್ದಿ ವಿಭಾಗದ ಮುಖ್ಯಸ್ಥರಾದ ಮನೋಹರ್ ಪ್ರಸಾದ್, ಪುಣೆಯ ನಗರಸೇವಕಿ ಸುಜಾತಾ ಸದಾನಂದ ಶೆಟ್ಟಿ ಅವರನ್ನು ಶಾಲು ಹೊದೆಸಿ ಸ್ಮರಣಿಕೆ, ಪುಷ್ಪಗುತ್ಛವನ್ನಿತ್ತು ಸಮ್ಮಾನಿಸಲಾಯಿತು.
ಪುಣೆ ತುಳುಕೂಟದ ಯುವ ವಿಭಾಗದ ಕಾರ್ಯಾಧ್ಯಕ್ಷ ಅಡ್ವೊಕೇಟ್ ರೋಹನ್ ಪಿ. ಶೆಟ್ಟಿ ಮತ್ತು ಸದಸ್ಯರನ್ನು ಸತ್ಕರಿಸಿ, ಧ್ವಜವನ್ನು ಹಸ್ತಾಂತರಿಸಿದರು. ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಗೌರವಾಧ್ಯಕ್ಷ ಮಿಯ್ನಾರ್ ರಾಜ್‌ಕುಮಾರ್ ಎಂ. ಶೆಟ್ಟಿ, ಅಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಉಪಾಧ್ಯಕ್ಷರಾದ ಮೋಹನ್ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಎಣ್ಣೆಹೊಳೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿಲ್ಮಾ ಮಾರ್ಟಿಸ್, ಪಿಂಪ್ರಿ ಚಿಂಚಾÌಡ್ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮ್ ಸುವರ್ಣ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಡ್ವೊಕೇಟ್ ರೋಹನ್ ಪಿ. ಶೆಟ್ಟಿ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಂಗ ವಾಗಿ ಸಾಂಸ್ಕೃತಿಕ ಸಮಿತಿಯ ಸದಸ್ಯ ರಾದ ಸರಿತಾ ತುಷಾರ್ ಶೆಟ್ಟಿ ಮತ್ತು ಸರಿತಾ ವೈ. ಶೆಟ್ಟಿ ಅವರ ನಿರ್ದೇಶನದಲ್ಲಿ ಸಂಘದ ಸದಸ್ಯರ ಮಕ್ಕಳಿಂದ ನೃತ್ಯಪ್ರದರ್ಶನ ನಡೆಯಿತು. ಗೀತಾ ಪೂಜಾರಿ, ಸರಸ್ವತಿ ಕುಲಾಲ್ ಮತ್ತು ನವಿತಾ ಪೂಜಾರಿ ಪ್ರಾರ್ಥಿಸಿದರು.
ವಿಕೇಶ್ ರೈ ಶೇಣಿ ಮತ್ತು ಸರಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಮಲ್ಲಿಕಾ ಕುಲಾಲ್ ಸಮ್ಮಾನ ಪತ್ರ ವಾಚಿಸಿದರು. ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಮಾಣಿಬೆಟ್ಟು ವಿದ್ಯಾರ್ಥಿಗಳ ಸತ್ಕಾರವನ್ನು ನಡೆಸಿಕೊಟ್ಟರು. ಕಾಂತಿ ಸೀತಾರಾಮ ಶೆಟ್ಟಿ ಸಾಂಸ್ಕೃತಿಕ ನಿರೂಪಿಸಿದರು. ಸಭಾ ಕಾರ್ಯಕ್ರಮವನ್ನು ಶಿವನಾಥ ರೈ ಮೇಗಿನಗುತ್ತು ನಿರೂಪಿಸಿದರು. ಸಲಹಾ ಸಮಿತಿಯ ಸದಸ್ಯ ಚಂದ್ರಶೇಖರ ಶೆಟ್ಟಿ ನಿಟ್ಟೆ ಸ್ವಾಗತಿಸಿದರು. ಸಂತೋಷ್ ಶೆಟ್ಟಿ ಎಣ್ಣೆಹೊಳೆ ವಂದಿಸಿದರು.