ಪುಣೆ, ಆ. 16: ಪುಣೆ ತುಳುಕೂಟದ 22ನೇ ವಾರ್ಷಿಕೋತ್ಸವ ಸಮಾರಂಭವು ಆ. 15ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ ಬಾಣೇರ್ ಇಲ್ಲಿನ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಸಂಭ್ರಮದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸಂಘದ ಅಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ ಇವರ ಘನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಧಾರವಾಡ ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷರಾದ ಮಹೇಶ್ ಎಂ. ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ಬೆಟ್ಟು, ಚೆಫ್ ಟಾಕ್ ಹಾಸ್ಪಿಟಾಲಿಟಿ ಸರ್ವಿಸಸ್ ಬೆಂಗಳೂರು ವ್ಯವಸ್ಥಾಪಕ ನಿರ್ದೇಶಕರಾದ ಗೋವಿಂದ ಬಾಬು ಪೂಜಾರಿ, ಬಂಟ್ಸ್ ಅಸೋಸಿಯೇಶನ್ ಪುಣೆ ಅಧ್ಯಕ್ಷರಾದ ಮಿಯ್ನಾರು ಆನಂದ್ ಶೆಟ್ಟಿ, ತುಳು ಸಂಘ ಪಿಂಪ್ರಿ-ಚಿಂಚ್ವಾಡ್ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕುರ್ಕಾಲ್ ಇವರುಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಗೌರವಾಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ದಿವಾಕರ ಶೆಟ್ಟಿ ಮಾಣಿಬೆಟ್ಟು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾಡಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್ ಪಿ. ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭ ಖ್ಯಾತ ಉದ್ಯಮಿ, ಸಮಾಜಸೇವಕ, ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ವಿ. ಶೆಟ್ಟಿ ಹಾಗೂ ಗೋವಿಂದ ಬಾಬು ಪೂಜಾರಿ ಇವರುಗಳನ್ನು ಸಂಘದ ವತಿಯಿಂದ ವರ್ಷದ ಸಾಧಕರನ್ನಾಗಿ ವಿಶೇಷವಾಗಿ ಸಮ್ಮಾನಿಸಲಾಯಿತು.
ಎಸ್‌ಎಸ್‌ಸಿ ಹಾಗೂ ಎಚ್ಎಸ್‌ಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಪುಣೆಯಲ್ಲಿ ದೀರ್ಘಕಾಲ ಒಂದೇ ಹೊಟೇಲಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಕುಟ್ಟಿ ಶೆಟ್ಟಿ, ರಾಮಣ್ಣ ಶೆಟ್ಟಿ ಹಾಗೂ ಮೋನಪ್ಪ ಪೂಜಾರಿಯವರನ್ನು ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು. ಮನೋರಂಜನೆಯ ಅಂಗವಾಗಿ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ನೃತ್ಯ ವೈವಿಧ್ಯಗಳು, ಸಂಗೀತ ರಸಮಂಜರಿ ಹಾಗೂ ವಿಠಲ್ ನಾಯಕ್ ಕಲ್ಲಡ್ಕ ಮತ್ತು ಬಳಗ ಇವರಿಂದ ಸಂದೇಶದ ಸಂತೋಷ ಎನ್ನುವ ಗೀತಾ-ಸಾಹಿತ್ಯ ವಿಶೇಷ ಕಾರ್ಯಕ್ರಮ ಸಾದರಗೊಂಡಿತು. ಕಾರ್ಯಕ್ರಮದಲ್ಲಿ ಸಭಾಗೃಹ ಕಿಕ್ಕಿರಿದು ತುಳುಕನ್ನಡಿಗರಿಂದ ತುಂಬಿತ್ತು.
ಗೌರವಾಧ್ಯಕ್ಷ ತಾರಾನಾಥ ಕೆ. ರೈ ಸ್ವಾಗತಿಸಿದರು. ಕಾಂತಿ ಸೀತಾರಾಮ ಶೆಟ್ಟಿ, ಅಕ್ಷತಾ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದಿವಾಕರ ಶೆಟ್ಟಿ ಮಾಣಿಬೆಟ್ಟು ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರವನ್ನು ನಡೆಸಿಕೊಟ್ಟರು. ಶಂಕರ ಪೂಜಾರಿ ಬಂಟಕಲ್ಲು ಪ್ರಾರ್ಥಿಸಿದರು. ಶರತ್ ಭಟ್ ಅತ್ರಿವನ, ವಿಕೇಶ್ ರೈ ಶೇಣಿ ಸಮ್ಮಾನಪತ್ರ ವಾಚಿಸಿದರು. ಪ್ರಿಯಾ ಎಚ್. ದೇವಾಡಿಗ ಅತಿಥಿಗಳನ್ನು ಪರಿಚಯಿಸಿದರು.
ಚಿತ್ರ -ವರದಿ : ಕಿರಣ್ ಬಿ. ರೈ ಕರ್ನೂರು