Advertisement
ವರನಟ ಡಾ.ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲೆ ನಡೆಯುತ್ತಿರುವ ಸಿದ್ಧತೆಯನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಬೆಳಿಗ್ಗೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಬಿಬಿಎಂಪಿ ಅಧಿಕಾರಿಗಳು, ಇಂಜಿನಿಯರ್ ಗಳು ಉಪಸ್ಥಿತರಿದ್ದರು.
Related Articles
Advertisement
ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು ಪುನೀತ್ ಅವರ ಅಂತಿಮ ದರ್ಶನ ಪಡೆದರು.
ಧೃತಿ ದೆಹಲಿಗೆ
ಅಮೆರಿಕಾದಿಂದ ಆಗಮಿಸುತ್ತಿರುವ ಮಧ್ಯಾಹ್ನದ ವೇಳೆ ಪುನೀತ್ ಅವರ ಪುತ್ರಿ ಧೃತಿ ದೆಹಲಿಗೆ ತಲುಪಲಿದ್ದು, ಸಂಜೆ ವೇಳೆಗೆ ಬೆಂಗಳೂರು ತಲುಪಲಿದ್ದಾರೆ. ಅವರು ಅಂತಿಮ ದರ್ಶನ ಪಡೆದ ಬಳಿಕ ಸಕಲ ಸರಕಾರಿ ಗೌರವ ಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಪಾರ್ಥಿವ ಶರೀರದ ಮೆರವಣಿಗೆ
ಪುನೀತ್ ಅವರ ಪಾರ್ಥಿವ ಶರೀರದ ಮೆರವಣಿಗೆ ಕಂಠೀರವ ಸ್ಟೇಡಿಯಂನಿಂದ , ಕಂಠೀರವ ಸ್ಟುಡಿಯೋವರೆಗೆ ನಡೆಸಲಾಗುತ್ತಿದ್ದು, ಸಂಜೆ ಗಂಟೆಯಿಂದ ನಡೆಸಲು ಸಕಲ ಸಿದ್ಧತೆಗಳನ್ನು, ಭದ್ರತೆಯನ್ನು ಕೈಗೊಳ್ಳಲಾಗಿದೆ.