Advertisement

ಪುನೀತ್‌ ಪ್ರಥಮ ಪುಣ್ಯಸ್ಮರಣೆ: ಪತ್ನಿ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಭಾವುಕ ಪತ್ರ

06:14 PM Oct 29, 2022 | Team Udayavani |

ಬೆಂಗಳೂರು: ಪುನೀತ್‌ ರಾಜಕುಮಾರ್‌ ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಪುನೀತ್‌ ಪತ್ನಿ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ. “ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ.

Advertisement

ಇದನ್ನೂ ಓದಿ:ಚುನಾವಣೆಗೆ ಮೊದಲೊಂದು ಮಾಸ್ಟರ್ ಸ್ಟ್ರೋಕ್: ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ?

ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ.

ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು’ ಎಂದು ಬರೆದಿರುವ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ತಮ್ಮ ಪತ್ರವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next