Advertisement
ಕಂಡಲ್ಲಿ ದೂರು ನೀಡಿಪೊಲೀಸ್ ಇಲಾಖೆಗೆ ಕ್ವಾರಂಟೈನ್ ಕೇಂದ್ರಗಳ ಭದ್ರತೆಯ ಜವಾಬ್ದಾರಿ ನೀಡಲಾಗಿದೆ. ಇಲಾಖೆಯಿಂದ ಗೃಹರಕ್ಷಕ ದಳದ ಸಿಬಂದಿಯನ್ನು ನಿಯೋಜಿಸಲಾಗಿದೆ. ಒಂದು ವೇಳೆ ಕ್ವಾರಂಟೈನ್ ನಿಯಮ ಗಳ ಉಲ್ಲಂಘನೆ ಗಮನಕ್ಕೆ ಬಂದರೆ ಸಮೀಪದ ಪೊಲೀಸ್ ಠಾಣೆ ಯನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ಡಾ| ಸೂಡ ಅವರು ಹೇಳಿದರು.
ಹೆಬ್ರಿ: ಹೆಬ್ರಿ-ಕುಚ್ಚಾರು ರಸ್ತೆಯ ವಸತಿಗೃಹದಲ್ಲಿ ಕ್ವಾರಂಟೈನ್‌ನಲ್ಲಿದ್ದ ಮುಂಬಯಿಯಿಂದ ಬಂದವರಲ್ಲಿ ಇಬ್ಬರಿಗೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ವಸತಿಗೃಹದ ಸುತ್ತ ಸೀಲ್‌ಡೌನ್ ಮಾಡಲಾಗಿದೆ. ಅಲ್ಲಿರುವ ಇತರರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಬಾಧಿತರು ಇದ್ದ ಕೊಠಡಿಗಳನ್ನು ರಾಸಾಯನಿಕ ಬಳಸಿ ಶುದ್ಧೀಕರಿಸಲಾಗಿದೆ. ಸ್ಥಳೀಯರು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ತಹಶೀಲ್ದಾರ್ ಮಹೇಶ್ಚಂದ್ರ ತಿಳಿಸಿದ್ದಾರೆ. ವಸತಿಗೃಹದ ಉಸ್ತುವಾರಿ ವಿರುದ್ಧ ದೂರು
ಸೀಲ್‌ಡೌನ್ ಆಗಿರುವ ವಸತಿಗೃಹದಲ್ಲಿ ಕ್ವಾರಂಟೈನ್‌ನಲ್ಲಿರುವವರ ಮೇಲ್ವಿಚಾರಣೆ ಮಾಡುತ್ತಿದ್ದ ಇಬ್ಬರು ನಿಯಮ ಉಲ್ಲಂಘನೆ ಮಾಡಿ ಹೊರಗಡೆ ತಿರುಗಾಡುತ್ತಿದ್ದರು ಎಂದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ವಸತಿಗೃಹದ ಉಸ್ತುವಾರಿ ವಹಿಸಿಕೊಂಡವರು ಕೂಡ ಅದೇ ಸ್ಥಳದಲ್ಲಿ ಕ್ವಾರಂಟೈನ್‌ನಲ್ಲಿರಬೇಕಿತ್ತು. ಆದರೆ ಅವರು ನಾಡಾ³ಲು ಗ್ರಾಮದಲ್ಲಿರುವ ತಮ್ಮ ಮನೆಗೆ ಹೋಗಿದ್ದೂ ಅಲ್ಲದೆ ಪರಿಸರದಲ್ಲಿ ಅಡ್ಡಾಡುತ್ತಿದ್ದಾರೆ
ಎಂದು ದೂರು ಬಂದಿತ್ತು. ಅವರನ್ನು ಕ್ವಾರಂಟೈನ್ ಮಾಡುವಂತೆ ಆರೋಗ್ಯಾಧಿಕಾರಿಗಳು ಸೂಚಿಸಿರುವ ಹಿನ್ನೆಲೆಯಲ್ಲಿ ರಾತ್ರಿ ಪೊಲೀಸ್ ಹಾಗೂ ದೂರುದಾರರು ಸೀತಾನದಿಗೆ ಹೋಗಿ ಪರಿಶೀಲಿಸಿದಾಗ ಆರೋಪಿತರು ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಸುತ್ತಾಡುತ್ತಿರುವುದು ದೃಢವಾಗಿದೆ ಎಂದು ಮೂಲಗಳು ತಿಳಿಸಿವೆ.