Advertisement

ಕಳವುಗೈದ ಆರೋಪಿಗೆ ಶಿಕ್ಷೆ

11:35 PM Jun 13, 2023 | Team Udayavani |

ಉಡುಪಿ: ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗೆ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

Advertisement

2022ರ ಜ. 21ರಂದು 1 ಗಂಟೆಯ ಸುಮಾರಿಗೆ ಸಂತೋಷ ಪೂಜಾರಿ ಅಂಬಾಗಿಲು ಕಕ್ಕುಂಜೆಯ ಪ್ರಮಿಳಾ ಬಂಗೇರ ಅವರ ಮನೆಯ ಒಳಗೆ ಪ್ರವೇಶಿಸಿ ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆಯಲ್ಲಿ ನಗರ ಠಾಣೆಯ ಪೊಲೀಸ್‌ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶ ವಿಘ್ನೇಶ್‌ ಕುಮಾರ್‌ ಅವರು ಆರೋಪಿ ಸಂತೋಷ ಪೂಜಾರಿಗೆ ಒಟ್ಟು 4 ವರ್ಷ ಕಠಿನ ಸಜೆ ಮತ್ತು 2,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ 2 ತಿಂಗಳ ಸಾದಾ ಶಿಕ್ಷೆ ವಿಧಿಸಿ, ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next