Advertisement

ಕಳವುಗೈದ ಆರೋಪಿಗೆ ಶಿಕ್ಷೆ

11:23 PM Mar 23, 2023 | Team Udayavani |

ಉಡುಪಿ: ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

Advertisement

2022ರ ಜೂ. 29ರಂದು ರಾತ್ರಿ ಸುಖೇಶ್‌ ನಾಯ್ಕ ಎಂಬಾತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಸಾಯಿಬಾಬಾ ನಗರದ ಅಡ್ಡ ರಸ್ತೆಯಲ್ಲಿರುವ ಸತ್ಯನಾರಾಯಣ ಹೆಗ್ಡೆ ಅವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಬೆಳ್ಳಿಯ ಪದಕಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸ್‌ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶೆ ಶಕುಂತಲಾ ಅವರು ಆರೋಪಿ ಸುಖೇಶ್‌ ನಾಯ್ಕಗೆ ಒಟ್ಟು 10,000 ರೂ. ದಂಡ ಹಾಗೂ 10 ವರ್ಷಗಳ ಕಠಿನ ಕಾರಾಗೃಹ ವಾಸ ಶಿಕ್ಷೆ, ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷದ ಸಾಧಾರಣ ಶಿಕ್ಷೆ ವಿಧಿಸಿ, ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ.ವಾದ ಮಂಡಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next