Advertisement
ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕೈಗೊಂಡಿರುವ ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಶನಿವಾರ ಸುದ್ಧಿಗೋಷ್ಠಿ ನಡೆಸಿದ ಅವರು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಭಾರೂ ಪ್ರಮಾಣದಲ್ಲಿ ಗುರುತಿನ ಚೀಟಿಗಳನ್ನು ಸಂಗ್ರಹಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಹಾಗಾಗಿ ಈ ಬಾರಿ ಅಗ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Related Articles
Advertisement
ಚುನಾವಣೆ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ತಲಾ 18 ವಾಯು ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡ ಹಾಗೂ ವಿಡಿಯೋ ಕಣ್ಗಾವಲು ತಂಡಗಳನ್ನು ನೇಮಿಸಲಾಗಿದೆ. ಜತೆಗೆ ಆರು ವಿವಿಟಿ ತಂಡಗಳನ್ನು ರಚಿಸಿದ್ದು, ಒಟ್ಟು 410 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅದರಂತೆ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 36,97,211 ಪುರುಷರು, 34,03,597 ಮಹಿಳಾ ಮತದಾರರು ಹಾಗೂ 703 ಇತರೆ ಮತದಾರರೂ ಸೇರಿದಂತೆ ಒಟ್ಟು 71,01,561 ಮತದಾರರು ಪಟ್ಟಿಯಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.
ಗೈರು ಮತದಾರರ ಪರಿಶೀಲನೆ: ಪಾಲಿಕೆ ಅಧಿಕಾರಿಗಳು ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಿಸಿದ್ದು, ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೃತಪಟ್ಟ ಮತದಾರರ ಹೆಸರನ್ನು ತೆಗೆದಿದ್ದಾರೆ. ಅದರಂತೆ ಚುನಾವಣೆಗೆ ಮೊದಲು ಮತ್ತೂಮ್ಮೆ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ತೆರಳಿ ಮತದಾರರ ಮಾಹಿತಿ ಕಲೆಹಾಕಲಿದ್ದು,
ಮೃತಪಟ್ಟ ಮತದಾರರ ಹೆಸರಿನ ಮುಂದೆ “ಡಿ’ ಎಂದು, ಸ್ಥಳಾಂತರಗೊಂಡಿದ್ದರೆ “ಎಸ್’ ಹಾಗೂ ಮತದಾನದಲ್ಲಿ ಹಲವು ಬಾರಿ ಗೈರಾಗಿದ್ದರೆ “ಎ’ ಎಂದು ಬರೆಯಲಿದ್ದಾರೆ. ಅದನ್ನು ಆಧಾರಿಸಿ ಮತದಾನ ಸಂದರ್ಭದಲ್ಲಿ ಈ ಸಂಕೇತವಿರುವ ಮತದಾರರನ್ನು ಚುನಾವಣಾಧಿಕಾರಿಗಳು ಎರಡೆರಡು ಬಾರಿ ಪರಿಶೀಲಿಸುತ್ತಾರೆ ಎಂದು ಆಯುಕ್ತರು ಹೇಳಿದರು.
51 ಸಾವಿರ ಮಂದಿ ಸಿಬ್ಬಂದಿ ನಿಯೋಜನೆ: ಮೂರು ಲೋಕಸಭಾ ಕ್ಷೇತ್ರಗಳಲ್ಲಿನ ಚುನಾವಣೆಗೆ ಒಟ್ಟು 51 ಸಾವಿರ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದು, ಈಗಾಗಲೇ ಅವರಿಗೆ ತರಬೇತಿ ನೀಡುವ ಕಾರ್ಯ ಆರಂಭಿಸಲಾಗಿದೆ. ಕಳೆದ ಬಾರಿ ವಿವಿಪ್ಯಾಟ್ ಯಂತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಲು ಹೆಚ್ಚುವರಿಯಾಗಿ ಒಬ್ಬರು ಸಿಬ್ಬಂದಿ ನೇಮಿಸಿದ್ದರಿಂದ ಒಟ್ಟು 65 ಸಾವಿರ ಸಿಬ್ಬಂದಿ ನೇಮಿಸಿಕೊಳ್ಳಲಾಗಿತ್ತು. ಆದರೆ, ಈ ಬಾರಿ ಮತಗಟ್ಟೆ ಅಧಿಕಾರಿಯೇ ಅದರ ಉಸ್ತುವಾರಿ ವಹಿಸಿಕೊಳ್ಳಬೇಕಿರುವುದರಿಂದ ಸಿಬ್ಬಂದಿ ಸಂಖ್ಯೆ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದರು.
ವಿವಿಪ್ಯಾಟ್ ಪ್ರಾತ್ಯಾಕ್ಷಿಕೆ: ಚುನಾವಣೆಗೆ ಮೊದಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದ ಪ್ರಮುಖ ಉದ್ಯಾನಗಳು, ಮಾಲ್‌ಗಳು ಹಾಗೂ ಕಾಲೇಜುಗಳಲ್ಲಿ ಇವಿಎಂ-ವಿವಿಪ್ಯಾಟ್‌ಗಳ ಪ್ರಾತ್ಯಕ್ಷಿಕೆ ಆಯೋಜಿಸಲಾಗುವುದು. ಜತೆಗೆ ಪರರಿಗೆ ಗುರುತಿನ ಚೀಟಿ ನೀಡುವುದು ದಂಡಾರ್ಹ ಅಪರಾಧ ಎಂಬ ಕುರಿತ ಕಿರುಚಿತ್ರಗಳನ್ನು ಚಿತ್ರಮಂದಿರಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಆಯುಕ್ತರು ಹೇಳಿದರು.
ಮಾಹಿತಿ, ದೂರು ನೀಡಲು ಆ್ಯಪ್: ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು “ಚುನಾವಣಾ ಆ್ಯಪ್’ ಅಭಿವೃದ್ಧಿಪಡಿಸಿದ್ದು, ಮತದಾರರ ಹೆಸರು, ಮತಗಟ್ಟೆ ವಿಳಾಸ, ಕ್ರಮ ಸಂಖ್ಯೆ ಸೇರಿ ಇತರೆ ಮಾಹಿತಿ ಆ್ಯಪ್‌ನಲ್ಲಿ ದೊರೆಯಲಿದೆ ಎಂದು ಮಂಜುನಾಥ ಪ್ರಸಾದ್ ಹೇಳಿದರು.
ಇದರೊಂದಿಗೆ ಮತದಾರರ ಮೇಲೆ ಒತ್ತಡ ಹೇರುವುದು, ಹಣ ಹಂಚಿಕೆ, ಗುರುತಿನ ಚೀಟಿ ಸಂಗ್ರಹ ಸೇರಿದಂತೆ ನೀತಿ ಸಂಹಿತೆ ಉಲ್ಲಂಘನೆ ಕುರಿತು ಸಾರ್ವಜನಿಕರು “ಸಿ ವಿಜಿಲ್’ ಆ್ಯಪ್ ಮೂಲಕ ಮಾಹಿತಿ ನೀಡಬಹುದಾಗಿದೆ. ಸಾರ್ವಜನಿಕರಿಂದ ಬಂದ ದೂರುಗಳು ನೇರವಾಗಿ ಸಂಬಂಧಿಸಿದ ಚುನಾವಣಾ ಅಧಿಕಾರಿಗೆ ರವಾನೆಯಾಗಲಿದ್ದು, ಅವರು ನಿಯಮ ಉಲ್ಲಂ ಸಿದವರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ.
ಇದರೊಂದಿಗೆ ಮತದಾರರು ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿ ಅಥವಾ ದೂರುಗಳನ್ನು ನೀಡಲು “1950′ ಉಚಿತ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.