ಪಂಜಾಬ್ : ಪಂಜಾಬ್‌ನ ಪಟಿಯಾಲದಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತು ಖಾಲಿಸ್ತಾನಿ ಬೆಂಬಲಿಗರ ನಡುವೆ ಶುಕ್ರವಾರ ಘರ್ಷಣೆ ನಡೆದಿದೆ. ಈ ಗಲಾಟೆಯಲ್ಲಿ ಬಹಿರಂಗವಾಗಿ ಕತ್ತಿ ಬೀಸುವಿಕೆ ಮತ್ತು ಕಲ್ಲು ತೂರಾಟ ನಡೆದಿದೆ.
ಪಟಿಯಾಲಾದ ಕಾಳಿ ದೇವಿ ಮಂದಿರದ ಬಳಿ ಇಂದು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಕಂಡು ಪೊಲೀಸರನ್ನು ನಿಯೋಜಿಸಲಾಗಿದೆ. ಮೆರವಣಿಗೆಗೆ ಅನುಮತಿ ಇಲ್ಲದ ಕಾರಣ ನಾವು ಶಿವಸೇನೆಯ ಮುಖ್ಯಸ್ಥ ಹರೀಶ್ ಸಿಂಗ್ಲಾ ಅವರೊಂದಿಗೆ ಮಾತನಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಲಿಸ್ತಾನ್ ವಿರುದ್ಧ ಪಾದಯಾತ್ರೆ ಕೈಗೊಳ್ಳುವುದಾಗಿ ಶಿವಸೇನೆ ಒಂದು ದಿನ ಮುಂಚಿತವಾಗಿ ಘೋಷಿಸಿತ್ತು, ಹಾಗಾಗಿ ಪೊಲೀಸರು ಆಗಲೇ ಸಿದ್ಧರಾಗಿದ್ದ ಕಾರಣ ಭಾರಿ ಹಿಂಸಾಚಾರ ತಡೆಯಲಾಗಿದೆ ಎಂದು ಹೇಳಲಾಗುತ್ತಿದೆ.