Advertisement

ಕಾರಿನ ಮೇಲೆ ಉರುಳಿ ಬಿದ್ದ ಸರಕು ಹೊತ್ತ ಟ್ರೈಲರ್ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

02:54 PM Sep 13, 2022 | Team Udayavani |

ಚಂಡೀಗಢ : ಟ್ರೇಲರ್ ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮಧ್ಯದಲ್ಲೇ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಂಢೀಗಡದಲ್ಲಿ ಸಂಭವಿಸಿದೆ.

Advertisement

ಫಗ್ವಾರಾ ಮತ್ತು ಚಂಡೀಗಢವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅಪಘಾತದ ಭೀಕರತೆಯನ್ನು ತೋರಿಸುವಂತಿದೆ.

ಸಿಸಿ ಟಿವಿ ದೃಶ್ಯಾವಳಿ ಕಂಡಂತೆ 18 ಚಕ್ರದ ಟ್ರೈಲರ್ ಚಾಲಕ ವಾಹನವನ್ನು ತಿರುವಿನಲ್ಲಿ ನಿಧಾನಗೊಳಿಸದೆ ತಿರುವು ಪಡೆದಿದ್ದಾನೆ ಈ ವೇಳೆ ವಾಹನ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲೇ ಉರುಳಿ ಬಿದ್ದಿದೆ ದುರಾದೃಷ್ಟವೆಂಬಂತೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ಕಾರಿನ ಮೇಲೆಯೇ ಬಿದ್ದಿದೆ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಜೀವಕಳೆದುಕೊಂಡಿದ್ದಾರೆ. ಅದೃಷ್ಟವಶಾತ್ ಇನ್ನೊಂದು ಕಾರು ಸ್ವಲ್ಪದರಲ್ಲೇ ಪಾರಾಗಿದೆ.

ಟ್ರೈಲರ್ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿ ಬಿದ್ದಿದೆ, ಅಲ್ಲದೆ ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next