Advertisement

Punjab: ಬಿಜೆಪಿ ನಾಯಕನ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ

10:00 AM Apr 17, 2023 | Team Udayavani |

ಚಂಡಿಗಢ: ಪಂಜಾಬ್ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಲ್ವಿಂದರ್ ಗಿಲ್ ಅವರ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ಭಾನುವಾರ  ( ಏ.16 ರಂದು) ನಡೆದಿದೆ.

Advertisement

ಅಮೃತಸರದಲ್ಲಿರುವ ಬಲ್ವಿಂದರ್ ಗಿಲ್ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಬಲ್ವಿಂದರ್ ಗಿಲ್ ಮನೆಯಲ್ಲಿ ಇರುವಾಗಲೇ ಬೈಕ್‌ ನಲ್ಲಿ ಬಂದ ದುಷ್ಕರ್ಮಿ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಇದರಿಂದ ನಾಯಕನ ಬಾಯಿಗೆ ಗಾಯವಾಗಿದ್ದು, ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಬಲ್ವಿಂದರ್ ಗಿಲ್ ನಿವಾಸದ ಬಳಿ ಬಂದು ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ಸದ್ಯ ಈ ಬಗ್ಗೆ ಹತ್ತಿರದ ಸಿಸಿಟಿವಿಯನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು  ಅಮೃತಸರ ಗ್ರಾಮಾಂತರ ಎಸ್‌ಎಸ್‌ಪಿ ಸತೇಂದರ ಸಿಂಗ್ ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next