Advertisement

ವೈದ್ಯೆ ಗುರುಪ್ರೀತ್ ಕೌರ್ “ಕೈ” ಹಿಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್

02:49 PM Jul 07, 2022 | Team Udayavani |

ಅಮೃತ್ ಸರ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಗುರುವಾರ (ಜುಲೈ 07) ವೈದ್ಯೆ ಗುರುಪ್ರೀತ್ ಕೌರ್ ಅವರೊಂದಿಗೆ ಸರಳವಾಗಿ ವಿವಾಹವಾದರು. ಈ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ, ಕುಟುಂಬ ಸದಸ್ಯರು ಮತ್ತು ಆಪ್ತರು ಪಾಲ್ಗೊಂಡಿದ್ದರು.

Advertisement

ಇದನ್ನೂ ಓದಿ:ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

ಚಂಡೀಗಢದ ಮಾನ್ ನಿವಾಸದಲ್ಲಿ ಖಾಸಗಿಯಾಗಿ ವಿವಾಹ ಸಮಾರಂಭ ನೆರವೇರಿತ್ತು. ಸಿಎಂ ಮಾನ್ ಅವರ ವಿವಾಹ ಸಮಾರಂಭದ ಎಲ್ಲಾ ಸಂಪ್ರದಾಯಗಳನ್ನು ಕೇಜ್ರಿವಾಲ್ ಮುಂದಾಳತ್ವದಲ್ಲಿ ನೆರವೇರಿತ್ತು.

ಇಂದು ನನ್ನ ಕಿರಿಯ ಸಹೋದರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಜೀ ವಿವಾಹವಾಗುವ ಮೂಲಕ ಹೊಸ ಜೀವನ ಆರಂಭಿಸಿದ್ದು, ನನಗೆ ತುಂಬಾ ಖುಷಿಯ ವಿಚಾರವಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Advertisement

ಇಬ್ಬರಿಗೂ ದೇವರು ಒಳ್ಳೆಯದು ಮಾಡಲಿ, ಅವರ ವೈವಾಹಿಕ ಜೀವನ ಸುಖಕರವಾಗಿರಲಿ ಎಂದು ಹಾರೈಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿದರು. ಸಿಎಂ ಮಾನ್ ಅವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ನಾನು ಮಾನ್ ಜೀ ಅವರ ಕುಟುಂಬ ಸದಸ್ಯರು, ಅವರ ತಾಯಿ ಮತ್ತು ಸಹೋದರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಘವ್ ಚಡ್ಡಾ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next