Advertisement

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

04:40 PM Mar 28, 2024 | Team Udayavani |

ಅಮೃತಸರ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್  ಅವರ ಪತ್ನಿ ಗುರುಪ್ರೀತ್ ಕೌರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

Advertisement

ಸಾಮಾಜಿಕ ಮಾಧ್ಯಮ ಪೋಸ್ಟ್ ಗಳಲ್ಲಿ 50 ರ ಹರೆಯದ ಭಗವಂತ್ ಮಾನ್ ಅವರೂ ಸಾರ್ವಜನಿಕರೊಂದಿಗೆ ಸುದ್ದಿ ಹಂಚಿಕೊಂಡಿದ್ದಾರೆ. ನವಜಾತ ಮಗಳು ಆರೋಗ್ಯದಿಂದಿದ್ದಾಳೆ ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

“ಸರ್ವಶಕ್ತನು ನನಗೆ ಮಗಳ ಉಡುಗೊರೆಯನ್ನು ನೀಡಿದ್ದಾನೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ” ಎಂದು ಭಗವಂತ್ ಮಾನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ ಮುಖ್ಯಮಂತ್ರಿ ತಮ್ಮ ನವಜಾತ ಮಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಭಗವಂತ್ ಮಾನ್ ಅವರು 2015 ರಲ್ಲಿ ಮೊದಲ ಹೆಂಡತಿಯಿಂದ ವಿಚ್ಛೇದನ ಪಡೆದ ನಂತರ 2022 ರಲ್ಲಿ ಗುರುಪ್ರೀತ್ ಕೌರ್ ಅವರನ್ನು ವಿವಾಹವಾಗಿದ್ದರು. ಮೊದಲ ಪತ್ನಿಗೆ ಒಬ್ಬ ಮಗ ಮತ್ತು ಮಗಳಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ರೂಸ್ ಅವೆನ್ಯೂ ಕೋರ್ಟ್‌ನಿಂದ ಹೊರಬರುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳ ಎದುರು ‘ಮಾನ್ ಅವರಿಗೆ ಅಭಿನಂದನೆಗಳು’ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next