ನವದೆಹಲಿ: ಪಂಚರಾಜ್ಯ ಚುನಾವಣಾ ಮತಎಣಿಕೆ ಗುರುವಾರ (ಮಾರ್ಚ್ 08) ಬೆಳಗ್ಗೆ ಆರಂಭಗೊಂಡಿದ್ದು, ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಭಾರೀ ಮುನ್ನಡೆ ಸಾಧಿಸಿದೆ. ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತ(90 ಸ್ಥಾನ) ಪಡೆಯುವ ಮೂಲಕ ಭರ್ಜರಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ:ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಚಿಕಿತ್ಸೆ ಪಡೆದು ಎರಡು ತಿಂಗಳಲ್ಲೇ ಸಾವು!
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 59 ಸ್ಥಾನಗಳ ಅಗತ್ಯವಿದೆ. ಈವರೆಗಿನ ಮತಎಣಿಕೆ ಪ್ರಕಾರ ಆಮ್ ಆದ್ಮಿ ಪಕ್ಷ 70 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ, ಬಿಜೆಪಿ 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಚುನಾವಣೋತ್ತರ ಸಮೀಕ್ಷೆಯಲ್ಲಿಯೂ ಪಂಜಾಬ್ ನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂದು ತಿಳಿಸಿತ್ತು. ಪಂಜಾಬ್ ನ ಕಾಂಗ್ರೆಸ್ ಮುಖಂಡ ಕ್ಯಾ.ಅಮರಿಂದರ್ ಸಿಂಗ್ ಹಾಗೂ ನವಜ್ಯೋತ್ ಸಿಂಗ್ ಸಿಧು ನಡುವಿನ ಒಳಜಗಳದ ಪರಿಣಾಮ, ಕ್ಯಾ.ಅಮರಿಂದರ್ ಸಿಂಗ್ ಕಾಂಗ್ರೆಸ್ ತೊರೆದಿದ್ದರು. ಬಳಿಕ ಚರಣ್ ಜಿತ್ ಸಿಂಗ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು.
ಇದೀಗ ಚುನಾವಣಾ ಫಲಿತಾಂಶ ಹೊರಬೀಳತೊಡಗಿದ್ದು, ಪಂಜಾಬ್ ಮತದಾರ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು, ಆಮ್ ಆದ್ಮಿ ಪಕ್ಷಕ್ಕೆ ಅಧಿಕಾರ ನೀಡಲು ಮುಂದಾಗಿದ್ದಾರೆ. ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿತ್ತು.