ನವದೆಹಲಿ: ರಾಜ್ಯಾದ್ಯಂತ ಮಾರಣಾಂತಿಕ ರೂಪಾಂತರಿತ ಡೆಲ್ಟಾ ಪ್ಲಸ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಮಂಗಳವಾರ(ಜೂನ್ 29) ಜುಲೈ 10ರವರೆಗೆ ಕೋವಿಡ್ ನಿರ್ಬಂಧ ವಿಸ್ತರಿಸಿರುವುದಾಗಿ ಘೋಷಿಸಿದೆ
ಇದನ್ನೂ ಓದಿ:ಎಸಿ, ಕೂಲರ್ ಗಳಿಗೆ ಫ್ಲಿಪ್ ಕಾರ್ಟ್ ಮಾನ್ಸೂನ್ ಸೇಲ್ ನಲ್ಲಿ ಭರ್ಜರಿ ಆಫರ್..!
ಕೋವಿಡ್ 19 ನಿರ್ಬಂಧ ವಿಸ್ತರಿಸಿರುವುದರ ಜತೆಗೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದ ಸರ್ಕಾರ ಕೆಲವೊಂದು ವಿನಾಯ್ತಿಯನ್ನು
ಘೋಷಿಸಿದೆ. ಶೇ.50ರಷ್ಟು ಸಾಮರ್ಥ್ಯದೊಂದಿಗೆ ಬಾರ್, ಪಬ್ ಗಳನ್ನು ತೆರೆಯಲು ಅನುಮತಿ ನೀಡಿದೆ.
ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಪ್ರಕರಣ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 10ರವರೆಗೆ ಕೋವಿಡ್ 19 ನಿರ್ಬಂಧ ಮುಂದುವರಿಸಲು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ 11 ರಾಜ್ಯಗಳಲ್ಲಿ ಕೋವಿಡ್ 19 ರೂಪಾಂತರದ 50 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಶುಕ್ರವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ ಅತ್ಯಧಿಕ ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿದೆ ಎಂದು ತಿಳಿಸಿತ್ತು.