ಚಂಡೀಗಢ್: ಮುಖ್ಯಮಂತ್ರಿ ಭಗಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ರಾಜ್ಯದಲ್ಲಿನ ಸುಮಾರು 424 ಮಂದಿಗೆ ನೀಡಿರುವ ಭದ್ರತೆಯನ್ನು ಹಿಂಪಡೆಯುವ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮೇ 28 ಜನ್ಮ ಜಯಂತಿ:ದೇಶಕ್ಕಾಗಿ ಬದುಕಿದ ಮಹಾನ್ ಚೇತನ…ವಿನಾಯಕ ದಾಮೋದರ ಸಾವರ್ಕರ್
ನಿವೃತ್ತ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರಿಗೆ ನೀಡಿರುವ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಸೇರಿದಂತೆ 184 ಜನರ ಭದ್ರತೆಯನ್ನು ಪಂಜಾಬ್ ಸರ್ಕಾರ ವಾಪಸ್ ಪಡೆದಿತ್ತು.
ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್, ಕ್ಯಾಪ್ಟನ್ ಅಮರಿಂದರ್ ಸಿಂಗ್ ಪುತ್ರ ರಾನೀಂದರ್ ಸಿಂಗ್, ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಪತ್ನಿ, ಮಾಜಿ ಸಿಎಂ ಕುಟುಂಬ ಸದಸ್ಯರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ವರದಿ ವಿವರಿಸಿದೆ.
ಇತ್ತೀಚೆಗಷ್ಟೇ ಗುತ್ತಿಗೆಯಲ್ಲಿ ಶೇ.1ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಗ್ಯ ಸಚಿವರನ್ನು ಮುಖ್ಯಮಂತ್ರಿ ಭಗವಂತ್ ಮಾನ್ ಸಂಪುಟದಿಂದ ವಜಾಗೊಳಿಸಿದ್ದರು. ಮಾನ್ ಕ್ರಮಕ್ಕೆ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ವಿಪಕ್ಷಗಳು ಶ್ಲಾಘನೆ ವ್ಯಕ್ತಪಡಿಸಿದ್ದವು.