Advertisement

Punjab Governor: ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ಬನ್ವಾರಿಲಾಲ್ ಪುರೋಹಿತ್

03:21 PM Feb 03, 2024 | Team Udayavani |

ಚಂಡೀಗಢ: ಪಂಜಾಬ್ ರಾಜ್ಯಪಾಲ ಬನ್ವಾಲಿ ಲಾಲ್ ಪುರೋಹಿತ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ‘ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್‌ನ ಗವರ್ನರ್ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ದಯವಿಟ್ಟು ಅದನ್ನು ಸ್ವೀಕರಿಸಿ ಎಂದು ಪತ್ರದಲ್ಲಿ ಬರೆದಿದ್ದಾರೆ.

ಪುರೋಹಿತ್ ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ರಾಜ್ಯ ಸರ್ಕಾರದ ನಡುವಿನ ಉದ್ವಿಗ್ನತೆಯ ನಡುವೆಯೇ ಪುರೋಹಿತ್ ರಾಜೀನಾಮೆ ನೀಡಿದ್ದು, ಬಾಕಿ ಉಳಿದಿರುವ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ಉಭಯ ಪಕ್ಷಗಳ ನಡುವೆ ಗದ್ದಲ ಎಬ್ಬಿದ್ದು ಅದು ಈಗ ಸುಪ್ರೀಂ ಮೆಟ್ಟಿಲೇರಿದೆ.

ಇದನ್ನೂ ಓದಿ: Vijayapura; ಸಿದ್ಧಗಂಗಾ ಶ್ರೀಗಳಿಗೂ ಭಾರತರತ್ನ ಕೊಡಿ: ಡಿಸಿಎಂ ಡಿಕೆ ಶಿವಕುಮಾರ್

ಬನ್ವಾರಿಲಾಲ್ ಪುರೋಹಿತ್ ಯಾರು?
ಆಗಸ್ಟ್ 2021 ರಲ್ಲಿ ಅವರು ಪಂಜಾಬ್‌ನ 36 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆಗ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ರವಿಶಂಕರ್ ಝಾ ಅವರು ಪಂಜಾಬ್ ರಾಜಭವನದಲ್ಲಿ ಬನ್ವಾರಿಲಾಲ್ ಪುರೋಹಿತ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗಿನ ಜಗಳದಿಂದಾಗಿ ಬನ್ವಾರಿಲಾಲ್ ಪುರೋಹಿತ್ ಪ್ರಚಲಿತದಲ್ಲಿದ್ದರು.

Advertisement

ಬನ್ವಾರಿ ಲಾಲ್ ಪುರೋಹಿತ್ ಅವರು ಮೂರು ಬಾರಿ ಲೋಕಸಭಾ ಸಂಸದರಾಗಿದ್ದರು ಮತ್ತು ಮಧ್ಯ ಭಾರತದ ಅತ್ಯಂತ ಹಳೆಯ ಇಂಗ್ಲಿಷ್ ದಿನಪತ್ರಿಕೆ ‘ದಿ ಹಿತವಾದ್’ ನ ವ್ಯವಸ್ಥಾಪಕ ಸಂಪಾದಕರೂ ಆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next