ಚಂಡೀಗಢ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಕೃಷಿ ಮಸೂದೆಯ ವಿರುದ್ಧ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ. ರೈತರಿಂದ ತೀವ್ರ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ನಿರ್ಣಯ ಮಂಡನೆ ಮಾಡಿದ್ದಾರೆ.
ನೂತನ ಕೃಷಿ ಮಸೂದೆಯ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ಸದನದ ಎರಡನೇ ದಿನವಾದ ಇಂದು ನಿರ್ಣಯ ಮಂಡನೆ ಮಾಡಲಾಗಿದೆ.
ಕೇಂದ್ರದ ಕೃಷಿ ಕಾನೂನುಗಳನ್ನು ವಿರುದ್ಧವಾಗಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮೂರು ಮಸೂದೆಗಳನ್ನು ಸದನಕ್ಕೆ ಪರಿಚಯಿಸಿದರು. ಅವುಗಳೆಂದರೆ ರೈತರು ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020, ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು ರೈತರು (ಸಬಲೀಕರಣ) ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020.
ಇದನ್ನೂ ಓದಿ:ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ
ಕೃಷಿ ಕಾನೂನುಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ಕರಡು ನಿರ್ಣಯವು ಹೇಳುತ್ತದೆ. ಈ ಶಾಸನಗಳು ಸಂವಿಧಾನದಲ್ಲಿ ಪ್ರತಿಪಾದಿಸಿರುವಂತೆ ರಾಜ್ಯಗಳ ಕಾರ್ಯಗಳು ಮತ್ತು ಅಧಿಕಾರಗಳನ್ನು ಅತಿಕ್ರಮಿಸಲು ನೇರ ದಾಳಿಯಾಗಿದೆ” ಸಿಎಂ ಅಮರೀಂದರ್ ಸಿಂಗ್ ವಿಧಾನಸಭೆಗೆ ತಿಳಿಸಿದರು.