Advertisement

ಪಂಜಾಬ್ Vs ಹೈದರಾಬಾದ್- ಸೋತವರ ಹಣಾಹಣಿ: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ

04:22 PM Sep 25, 2021 | Team Udayavani |

ಶಾರ್ಜಾ: 14ನೇ ಆವೃತ್ತಿಯ ಯುಎಇ ಲೆಗ್ ನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಸೋಲನುಭವಿಸಿರುವ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗಲಿದೆ. ಶಾರ್ಜಾದಲ್ಲಿ ನಡೆಯಲಿರುವ ಪಂದ್ಯ ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಮುಖಾಮುಖಿಯಾಗಿರಲಿದೆ.

Advertisement

ಪಂಜಾಬ್ ಕಿಂಗ್ಸ್ ತಂಡ ಮೊದಲ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿತ್ತು. ಕೊನೆಯ ಓವರ್ ನಲ್ಲಿ ಗೆಲ್ಲಲು ನಾಲ್ಕು ರನ್ ಗಳಿಸಬೇಕಾಗಿದ್ದ ತಂಡ ಕೇವಲ ಒಂದು ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡಿತ್ತು.

ಇದನ್ನೂ ಓದಿ:2018ರಲ್ಲಿ ‘ಆ ಆಟಗಾರ’ನನ್ನು ಕೆಕೆಆರ್ ತಂಡದಿಂದ ಕೈ ಬಿಡಬಾರದಿತ್ತು: ಗೌತಮ್ ಗಂಭೀರ್

ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಖಭಂಗ ಅನುಭವಿಸಿತ್ತು. ಇದುವರೆಗೆ ಕೇವಲ ಒಂದು ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಕೇನ್ ವಿಲಿಯಮ್ಸನ್ ಪಡೆ ಇಂದಿನ ಪಂದ್ಯ ಸೋತರೆ ಬಹುತೇಕ ಟೂರ್ನಿಯಿಂದ ಹೊರ ಬೀಳಲಿದೆ.

ಸಂಭಾವ್ಯ ತಂಡ:

Advertisement

ಹೈದರಾಬಾದ್: ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ (ವಿ.ಕೀ), ಕೇನ್ ವಿಲಿಯಮ್ಸನ್ (ನಾ), ಮನೀಶ್ ಪಾಂಡೆ, ಕೇದಾರ್ ಜಾಧವ್, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್.

ಪಂಜಾಬ್: ಕೆಎಲ್ ರಾಹುಲ್ (ನಾ & ವಿ.ಕೀ), ಮಯಾಂಕ್ ಅಗರ್ವಾಲ್, ಏಡನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ಕ್ರಿಸ್ ಜೋರ್ಡಾನ್, ಹರಪ್ರೀತ್ ಬ್ರಾರ್, ಅರ್ಶ್ ದೀಪ್ ಸಿಂಗ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್.

Advertisement

Udayavani is now on Telegram. Click here to join our channel and stay updated with the latest news.

Next