ಚಂಡೀಗಢ್: ಟೆಂಡರ್ ಗಳಿಗೆ ಅಧಿಕಾರಿಗಳಿಂದ ಒಂದು ಪರ್ಸೆಂಟ್ ಕಮಿಷನ್ ಗೆ ಬೇಡಿಕೆ ಇಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಪಂಜಾಬ್ ನ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಂಪುಟದಿಂದ ವಜಾಗೊಳಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಜಾತಿ ಸಮಾವೇಶ ಮಾಡುವ ಸಿದ್ಧರಾಮಯ್ಯ ಡೋಂಗಿ ಜ್ಯಾತ್ಯತೀತ ನಾಯಕ: ಎಚ್.ಡಿ.ಕುಮಾರಸ್ವಾಮಿ
ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ವಿರುದ್ಧ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಲವಾದ ಸಾಕ್ಷ್ಯ ಲಭಿಸಿದ್ದು ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಈ ಕಠಿಣ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಸಚಿವ ವಿಜಯ್ ಸಿಂಗ್ಲಾ ಭ್ರಷ್ಟಾಚಾರದ ಬಗ್ಗೆ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ದೂರು ಬಂದಿದ್ದು, ಅದಕ್ಕೆ ಸಂಬಂಧಪಟ್ಟ ಸಾಕ್ಷ್ಯ ಕೂಡಾ ಲಭ್ಯವಾಗಿತ್ತು. ಇಡೀ ದೇಶದ ರಾಜಕೀಯ ಇತಿಹಾಸದಲ್ಲಿಯೇ ತಮ್ಮದೇ ಸಂಪುಟದ ಸಚಿವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡ ಎರಡನೇ ಘಟನೆಯಾಗಿದೆ. ಇದಕ್ಕೂ ಮುನ್ನ 2015ರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ಸಚಿವರೊಬ್ಬರನ್ನು ವಜಾಗೊಳಿಸಿದ್ದರು.
Related Articles
ಕೇವಲ ಶೇ.1 ಪರ್ಸೆಂಟ್ ನಷ್ಟು ಭ್ರಷ್ಟಾಚಾರವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಸರ್ಕಾರದ ಮೇಲೆ ಪಂಜಾಬ್ ಜನರು ತುಂಬಾ ಭರವಸೆಯನ್ನಿಟ್ಟು ಆಯ್ಕೆ ಮಾಡಿದ್ದಾರೆ. ಎಲ್ಲಿಯವರೆಗೆ ಭಾರತಾಂಬೆಯ ಪುತ್ರನಂತಿರುವ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ರೀತಿ ಯೋಧರಿರುತ್ತಾರೋ ಅಲ್ಲಿವರೆಗೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಭ್ರಷ್ಟಾಚಾರದ ಕುರಿತು ಸಿಂಗ್ಲಾ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿರ್ಧಾರವನ್ನು ಅರವಿಂದ್ ಕೇಜ್ರಿವಾಲ್ ಶ್ಲಾಘಿಸಿದ್ದಾರೆ. ನಿಮ್ಮ ಕ್ರಮದಿಂದ ನನ್ನ ಕಣ್ಣುಗಳಲ್ಲಿ ನೀರು ತರಿಸುವಂತೆ ಮಾಡಿದೆ. ಇಡೀ ದೇಶವೇ ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ ಮಾಡಿದ್ದೀರಿ ಎಂದು ಕೇಜ್ರಿವಾಲ್ ಬಹುಪರಾಕ್ ಹೇಳಿದ್ದಾರೆ.