Advertisement
ಪಂಜಾಬ್‌ನ ವಿವಿಧ ಭಾಗಗಳಲ್ಲಿ ರೈತ ಸಂಘಟನೆಗಳು ರೈಲು ತಡೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ. ಅಮೃತಸರದಲ್ಲಿ ರೈತರು ತಮ್ಮ ಅಂಗಿಗಳನ್ನು ಬಿಚ್ಚಿ, ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಸೆ.26ರವರೆಗೆ ನಡೆಯಲಿದೆ ಎಂದು ಘೋಷಿಸಲಾಗಿದ್ದ ರೈಲು ತಡೆಯನ್ನು ಸೆ.29ರವ ರೆಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 28ರಷ್ಟು ರೈಲುಗಳ ಸಂಚಾರವನ್ನು ರೈಲ್ವೇ ಇಲಾಖೆ ರದ್ದುಮಾಡಿದೆ.
ರೈತರ ಪ್ರತಿಭಟನೆಗಳ ನಡುವೆಯೇ ಪಂಜಾಬ್ ಮತ್ತು ಹರಿಯಾಣದಲ್ಲಿ ತತ್‌ಕ್ಷಣವೇ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಕೇಂದ್ರ ಸರಕಾರ ಆದೇಶಿಸಿದೆ. ಬಹುತೇಕ ರಾಜ್ಯಗಳಲ್ಲಿ ಮುಂದಿನ ವಾರ ದಿಂದ ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಆದರೆ, ಈ ಎರಡು ರಾಜ್ಯಗಳಲ್ಲಿ ಶನಿವಾರ ದಿಂದಲೇ ಭತ್ತ ಖರೀದಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ ಎಂದು ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ. ರೈತರಿಗೆ ನೆರವಾಗುವ ಸಲುವಾಗಿ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದೂ ಅವರು ಹೇಳಿದ್ದಾರೆ. ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸುತ್ತಿರುವವರು ರೈತ ವಿರೋಧಿಗಳು. ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆಯನ್ನು ಪ್ರಧಾನಿ ಮೋದಿ ನೀಡಿದ್ದು, ಅದನ್ನು ಗಮನದಲ್ಲಿಟ್ಟುಕೊಂಡೇ ಈ ಮಸೂದೆ ಅಂಗೀಕರಿಸಲಾಗಿದೆ.
– ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಸಿಎಂ