ಚಂಡೀಗಡ: ಕೇಂದ್ರಾಡಳಿತ ಪ್ರದೇಶವಾಗಿರುವ ಚಂಡೀಗಡವನ್ನು ಪೂರ್ಣಪ್ರಮಾಣದಲ್ಲಿ ಪಂಜಾಬ್‌ಗ ಹಿಂದಿರುಗಿಸಬೇಕೆಂದು ಪಂಜಾಬ್ ಸರ್ಕಾರ ರೂಪಿಸಿರುವ ನಿರ್ಣಯಕ್ಕೆ, ಶುಕ್ರವಾರ ಕರೆಯಲಾಗಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಪಂಜಾಬ್ ವಿಧಾನಸಭೆ ಸರ್ವಾನುಮತದ ಅಂಗೀಕಾರ ನೀಡಿದೆ.
ನಿರ್ಣಯವನ್ನು ಸದನದಲ್ಲಿ ಮಂಡಿಸುವ ಮುನ್ನ ಸದನದಲ್ಲಿದ್ದ ಇಬ್ಬರು ಬಿಜೆಪಿ ಸದಸ್ಯರು ನಿರ್ಣಯವನ್ನು ವಿರೋಧಿಸಿ ಸದನದಿಂದ ಹೊರನಡೆದಿದ್ದು, ಅವರ ಅನುಪಸ್ಥಿತಿಯಲ್ಲಿ ನಿರ್ಣಯಕ್ಕೆ ಅಂಗೀಕಾರ ಪಡೆಯಲಾಗಿದೆ.
ಇದನ್ನೂ ಓದಿ:ಮತೀಯ, ಧಾರ್ಮಿಕ, ಶಾಂತಿ ಕಾಪಾಡುವಲ್ಲಿ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮದ ಪಾತ್ರ
ಚಂಡೀಗಡ, ಪಂಜಾಬ್ ಹಾಗೂ ಹರ್ಯಾಣ ರಾಜ್ಯಗಳ ಜಂಟಿ ರಾಜಧಾನಿಯಾಗಿದ್ದು, ಇತ್ತೀಚೆಗೆ, ಚಂಡೀಗಡದಲ್ಲಿ ಸೇವೆ ಸಲ್ಲಿಸುತ್ತಿರುವ ಉಭಯ ರಾಜ್ಯಗಳ ಸರ್ಕಾರಿ ನೌಕರರಿಗೆ, ಕೇಂದ್ರ ಸರ್ಕಾರಿ ನೌಕರರ ಸೇವಾ ನಿಯಮಗಳು ಅನ್ವಯವಾಗುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದರು. ಇದನ್ನು ಪ್ರಬಲವಾಗಿ ವಿರೋಧಿಸಿರುವ ಪಂಜಾಬ್ ಸರ್ಕಾರ, ಚಂಡೀಗಡವನ್ನು ತನ್ನ ಸ್ವಾಧೀನಕ್ಕೆ ಪಡೆಯುವ ನಿರ್ಣಯ ಮಂಡಿಸಿದೆ.