Advertisement

ಮಾಡು ಇಲ್ಲವೇ ಮಡಿ ಪಂದ್ಯ: ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

07:04 PM Oct 24, 2020 | Mithun PG |

ದುಬೈ: ಐಪಿಎಲ್ 13 ನೇ ಆವೃತ್ತಿಯ 43ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿದ್ದು ಟಾಸ್ ಗೆದ್ದ ಸನ್ ರೈಸರ್ಸ್ ಬೌಲಿಂಗ್ ಆಯ್ದುಕೊಂಡಿದೆ.

Advertisement

ಪಂಜಾಬ್ ತಂಡ ಈಗಾಗಲೇ ಹ್ಯಾಟ್ರಿಕ್ ಗೆಲುವಿನ ಮೂಲಕ ಜಯ ಹಳಿಗೆ ಮರಳಿದೆ. ಇಂದಿನ ಪಂದ್ಯದಲ್ಲಿ ಎರಡೂ ತಂಡಗಳಿಗೂ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ತಲಾ 10ರಲ್ಲಿ 4 ಗೆಲುವು ಕಂಡಿರುವ ಉಭಯ ತಂಡಗಳು 8 ಅಂಕಗಳಿಸಿ ಕ್ರಮವಾಗಿ 5 ಮತ್ತು 6ನೇ ಸ್ಥಾನದಲ್ಲಿದೆ.

ಉಳಿದಿರುವ 4 ಪಂದ್ಯಗಳನ್ನು ಎರಡೂ ತಂಡಗಳೂ ಗೆಲ್ಲಬೇಕಾದ ಅನಿವಾರ್ಯತೆಯಿದ್ದು, ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಪ್ಲೇ ಆಫ್ ರೇಸ್ ನಲ್ಲಿ ಉಳಿದರೇ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.

ಇತ್ತಂಡಗಳೂ 15 ಬಾರಿ ಮುಖಾಮುಖಿಯಾಗಿದ್ದು 4ರಲ್ಲಿ ಪಂಜಾಬ್ ಮತ್ತು 11 ರಲ್ಲಿ ಹೈದರಾಬಾದ್ ಜಯಗಳಿಸಿದೆ.

ಆಡುವ ಹನ್ನೊಂದರ ಬಳಗ:

Advertisement

ಸನ್‌ರೈಸರ್ಸ್ ಹೈದರಾಬಾದ್ :  ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್, ಮನೀಶ್ ಪಾಂಡೆ, ವಿಜಯ್ ಶಂಕರ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಟಿ ನಟರಾಜನ್

ಕಿಂಗ್ಸ್ ಇಲೆವೆನ್ ಪಂಜಾಬ್: ಕೆ.ಎಲ್. ರಾಹುಲ್ (ನಾಯಕ), ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಮಂದೀಪ್ ಸಿಂಗ್, ದೀಪಕ್ ಹೂಡಾ, ಮುರುಗನ್ ಅಶ್ವಿನ್, ಕ್ರಿಸ್ ಜೋರ್ಡಾನ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷ್‌ದೀಪ್ ಸಿಂಗ್

Advertisement

Udayavani is now on Telegram. Click here to join our channel and stay updated with the latest news.

Next