ಅಬುಧಾಬಿ: ಐಪಿಎಲ್ 2020ರ 50ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿದ್ದು ಗೆಲ್ಲಲೇಬೇಕಾದ ಒತ್ತಡಕ್ಕೆ ಎರಡೂ ತಂಡಗಳೂ ಸಿಲುಕಿವೆ.
ಈಗಾಗಲೇ ಟಾಸ್ ಗೆದ್ದ ಸ್ಮಿತ್ ಪಡೆ ಬೌಲಿಂಗ್ ಮಾಡುವ ನಿರ್ಧಾರ ತಳೆದಿದೆ.
ಫ್ಲೇ ಆಫ್ ಹಂತಕ್ಕೇರಲು ಉಭಯ ತಂಡಗಳೀಗೂ ಇಂದು ಗೆಲುವು ಅನಿವಾರ್ಯವಾಗಿದ್ದು, ಸತತ ಐದು ಪಂದ್ಯಗಳನ್ನು ಗೆದ್ದಿರುವ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಸಹಜವಾಗಿಯೇ ಉತ್ಸಾಹದಲ್ಲಿದೆ. ಪಂಜಾಬ್ 12 ಪಂದ್ಯಗಳಲ್ಲಿ 6ರಲ್ಲಿ ಗೆದ್ದಿದ್ದು, 12 ಅಂಕಗಳಿಸಿದೆ. ಉಳಿದ 2 ಪಂದ್ಯಗಳಲ್ಲಿ ಗೆಲುವು ಸಾಧಿಸಲೇಬೇಕಾಗಿದೆ.
ಮತ್ತೊಂದೆಡೆ ರಾಜಸ್ಥಾನ ಬಲಿಷ್ಠವಾಗಿದ್ದರೂ, ನಿರೀಕ್ಷಿತ ಪ್ರದರ್ಶನ ತೋರದಿದ್ದರಿಂದ 12 ಪಂದ್ಯಗಳಲ್ಲಿ ಕೇವಲ 5ರಲ್ಲಿ ಮಾತ್ರ ಜಯಸಾಧಿಸಿದೆ. ಪಂಜಾಬ್ ವಿರುದ್ಧ ಗೆದ್ದು ಫ್ಲೇ ಆಫ್ ರೇಸ್ ನಲ್ಲಿ ಉಳಿಯುವ ವಿಶ್ವಾಸದಲ್ಲಿ ಸ್ಮಿತ್ ಪಡೆಯಿದ್ದು, ಸೋತರೇ ಟೂರ್ನಿಯಿಂದ ಬಹುತೇಕ ಔಟ್ ಆಗಲಿದೆ.
ಆಡುವ ಹನ್ನೊಂದರ ಬಳಗ
ಕಿಂಗ್ಸ್ ಇಲೆವೆನ್ ಪಂಜಾಬ್: ಕೆ.ಎಲ್. ರಾಹುಲ್ (ನಾಯಕ), ಮಂದೀಪ್ ಸಿಂಗ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಹರ್ಷ್‌ದೀಪ್ ಸಿಂಗ್
ರಾಜಸ್ಥಾನ್ ರಾಯಲ್ಸ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್ , ಜೋಸ್ ಬಟ್ಲರ್, ರಿಯಾನ್ ಪರಾಗ್, ರಾಹುಲ್ ತಿವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ವರುಣ್ ಆರನ್, ಕಾರ್ತಿಕ್ ತ್ಯಾಗಿ