Advertisement

ಭದ್ರತೆ ಹಿಂತೆಗೆದುಕೊಂಡ ಬೆನ್ನಲ್ಲೇ ಗುಂಡಿಕ್ಕಿ ಹೆಸರಾಂತ ಪಂಜಾಬಿ ಗಾಯಕನ ಹತ್ಯೆ

08:08 PM May 29, 2022 | Team Udayavani |

ಮಾನ್ಸಾ : ಹೆಸರಾಂತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಭಾನುವಾರ (ಮೇ 29) ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಗೈದಿದ್ದಾರೆ.

Advertisement

ಮಾನ್ಸಾದ ಜವಾಹರ್ಕೆ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಗಾಯಕ ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದರು. ತತ್ ಕ್ಷಣ ಅವರನ್ನು ಮಾನ್ಸಾದ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಸಿಧು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಅವರಿಗೆ 27 ವರ್ಷ ವಯಸ್ಸಾಗಿತ್ತು.

ಶನಿವಾರ (ಮೇ 28) ಪಂಜಾಬ್‌ನಲ್ಲಿ ಭಗವಂತ್ ಮಾನ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರವು ಮೂಸೆವಾಲಾ ಅವರ ಭದ್ರತೆಯನ್ನು ಕಡಿತಗೊಳಿಸಿತ್ತು. ಮೂಸೆವಾಲಾ ಅವರ ಭದ್ರತೆಯಲ್ಲಿ ನಾಲ್ವರು ಬಂದೂಕುಧಾರಿ ಪೊಲೀಸ್ ಇದ್ದರು, ಅವರಲ್ಲಿ ಇಬ್ಬರನ್ನು ಹಿಂತೆಗೆದುಕೊಳ್ಳಲಾಗಿತ್ತು.

ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದಾಳಿಕೋರರು ಗಾಯಕ ಸಿಧು ಮತ್ತು ಅವರ ಇಬ್ಬರು ಸ್ನೇಹಿತರ ಮೇಲೆ ಗುಂಡು ಹಾರಿಸಿದ್ದಾರೆ.

ತೆರೆದ ಜೀಪಿನಲ್ಲಿ ಸವಾರಿ ಮಾಡಲು ಇಷ್ಟಪಡುವ ಗಾಯಕ-ರಾಜಕಾರಣಿ, ಅಶ್ಲೀಲ ದೃಶ್ಯಗಳಿಗಾಗಿ ಎರಡು ಸೇರಿದಂತೆ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರು.

Advertisement

ಮೂಸೆವಾಲ ಅವರಿಗೆ ವಿವಾದಗಳು ಹೊಸದಲ್ಲ. ಅವರು 18 ನೇ ಶತಮಾನದ ಸಿಖ್ ಯೋಧ ಮೈ ಭಾಗೋ ಅವರ ಹೆಸರನ್ನು ತಮ್ಮ ಹಾಡು `ಜಟ್ಟಿ ಜೆನಾಯ್ ಮೊರ್ಹ್ ದಿ ಬಂದೂಕ್ ವಾರ್ಗಿ’ ನಲ್ಲಿ ದುರುಪಯೋಗಪಡಿಸಿಕೊಂಡು ಸಿಖ್ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸುವ ಮೂಲಕ ಕೋಲಾಹಲವನ್ನು ಸೃಷ್ಟಿಸಲಾಗಿತ್ತು. ಬಳಿಕ ಕ್ಷಮೆ ಯಾಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next