Advertisement

ಇನ್ ಸ್ಟಾ ಗ್ರಾಂನಲ್ಲಿ ಪರಿಚಯ : ಅಪ್ರಾಪ್ತೆಯನ್ನು ಅತ್ಯಾಚಾರ ಎಸಗಿ ಆರೋಪಿ ವಿದೇಶಕ್ಕೆ ಪರಾರಿ

12:23 PM Sep 07, 2021 | Team Udayavani |

ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Advertisement

ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು ಇದೀಗ ಆಕೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿದ್ದು ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ಆ ಬಳಿಕ ನಾಪತ್ತೆಯಾಗಿದ್ದಾನೆ.

ಇದೀಗ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಬಂಟ್ವಾಳ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ :ಪ್ರಿಯಕರನಿಗಾಗಿ ಕರುಳಿನ ಕುಡಿಜತೆ ಕಾಡು ಸೇರಿದ ನೇತ್ರಾ! ಸಕ್ರೆಬೈಲಲ್ಲಿ ಆನೆಗಳ ಪ್ರೇಮ ಕತೆ

Advertisement
Advertisement

Udayavani is now on Telegram. Click here to join our channel and stay updated with the latest news.

Next