Advertisement

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

11:58 PM Nov 27, 2024 | Team Udayavani |

ಪುಂಜಾಲಕಟ್ಟೆ: ತೆಂಗಿನಕಾಯಿ ಕೀಳುತ್ತಿದ್ದಾಗ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ ( 51) ಅವರು ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಅವರು ನ.3ರಂದು ತನ್ನ ತೋಟದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

ನೇತ್ರ ದಾನ
ಗಿರಿಯಪ್ಪ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

Advertisement

Udayavani is now on Telegram. Click here to join our channel and stay updated with the latest news.

Next