Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 62,500 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಗೆ ಈಗಾಗಲೇ ಅನುಮತಿ ನೀಡಲಾಗಿದೆ. ರಾಜ್ಯ ಸರಕಾರದ ಪ್ರಯತ್ನದಿಂದ ಹೆಚ್ಚುವರಿ 7 ಸಾವಿರ ಮೆಟ್ರಿಕ್ ಟನ್ ಖರೀದಿಗೆ ಅನುಮತಿ ಲಭಿಸಿದೆ. ನೋಂದಣಿ ಒತ್ತಡ ಕಡಿಮೆ ಮಾಡಲು ಪ್ರತಿ ಖರೀದಿ ಕೇಂದ್ರದಲ್ಲಿ 6 ಕೌಂಟರ್ ಆರಂಭಿಸಲು ಸೂಚಿಸಲಾಗಿದೆ ಎಂದರು.
ರಾಜ್ಯದ ಎಲ್ಲ ಎಪಿಎಂಸಿಗಳಲ್ಲಿ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಊಟ ಕೊಡುವ ಪ್ರಯತ್ನ ನಡೆದಿದೆ. ಬಳ್ಳಾರಿ ಮತ್ತು ಮೈಸೂರಿನಲ್ಲಿ ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಇದೇ ಮಾದರಿಯಲ್ಲಿ ಎಲ್ಲ ಎಪಿಎಂಸಿಗಳಲ್ಲೂ ರೈತರಿಗೆ ಊಟ ಕೊಡಲಾಗುವುದು. ವರ್ತಕರೂ ಈ ಯೋಜನೆಗೆ ಸಹಕಾರ ನೀಡಲಿದ್ದಾರೆ ಎಂದು ಶಿವಾನಂದ ಪಾಟೀಲ್ ತಿಳಿಸಿದರು.