Advertisement
ಇದರ ಬೆನ್ನಲ್ಲೇ ಸರ್ಕಾರದ ಆದೇಶದ ಅನುಸಾರ ಬ್ಯಾಂಕ್‌ನ ಉಪಾಧ್ಯಕ್ಷ ಹಾಗೂ ಮಹಿಳೆಯೊಬ್ಬರ ಹೆಸರಿನಲ್ಲಿದ್ದ 1.55 ಕೋಟಿ ರೂ.ಗೂ ಅಧಿಕ ಮೌಲ್ಯದ 2 ಪ್ರತ್ಯೇಕ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಳೆದ 3 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರ ಸಂಸ್ಥೆಯ ವಂಚನೆ ಪ್ರಕರಣದ ತನಿಖೆ ಮತ್ತೆ ಮುನ್ನೆಲೆಗೆ ಬಂದಿದೆ.
Related Articles
Advertisement
ಸ್ಥಿರಾಸ್ತಿ ಜಪ್ತಿ ಮಾಡಲು ಸರ್ಕಾರದ ಆದೇಶ: ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿಯ ಸಂರಕ್ಷಣಾ ಅಧಿನಿಯಮ, 2004 (2005ರ ಕರ್ನಾಟಕ ಅಧಿನಿಯಮ, 30)ರ 3ನೇ ಪ್ರಕರಣದ (2)ನೇ ಉಪ-ಪ್ರಕರಣದ ಪ್ರಕಾರ ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರ ಲಿ.ಗೆ ಸೇರಿದೆ ಎನ್ನಲಾದ ಸ್ಥಿರಾಸ್ತಿ ಮತ್ತು ಚರಾಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದು ಅವಶ್ಯಕವಾಗಿದೆ. ಹೀಗಾಗಿ ಈ ಸಂಸ್ಥೆಯ ಹಣ, ಇತರೆ ಸ್ವತ್ತುಗಳು, ಸಂಸ್ಥೆಯ ಪ್ರವರ್ತಕರ ಪಾಲುದಾರರ, ನಿರ್ದೇಶಕರ, ವ್ಯವಸ್ಥಾಪಕರ, ಸದಸ್ಯರ ಅಥವಾ ಯಾರೇ ಇತರೆ ವ್ಯಕ್ತಿಯ ವೈಯಕ್ತಿಕ ಆಸ್ತಿಗಳು, ಠೇವಣಿ, ಬಡ್ಡಿ ಅಥವಾ ಇತರೆ ಖಾತ್ರಿ ಪ್ರಯೋಜನ ಗಳನ್ನು ಠೇವಣಿದಾರರಿಗೆ ಮರುಸಂದಾಯ ಮಾಡುವು ದಕ್ಕೆ ಸಾಧ್ಯವಾಗಿಲ್ಲವೆಂದು ಗೊತ್ತಾದಲ್ಲಿ ಬ್ಯಾಂಕ್ ಸಂಗ್ರಹಿಸಲಾದ ಠೇವಣಿಗಳಿಂದ ಬ್ಯಾಂಕ್‌ನ ಹೆಸರಿ ನಲ್ಲಿರುವ ಅಥವಾ ಯಾರೇ ಇತರ ವ್ಯಕ್ತಿಗಳ ಹೆಸರಿನಲ್ಲಿದೆ ಎನ್ನಲಾದ ಸ್ಥಿರಾಸ್ತಿಗಳನ್ನು ಸರ್ಕಾರವು ಜಪ್ತಿ ಮಾಡಿ ಕೊಳ್ಳುತ್ತದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ.
ಏನಿದು ವಂಚನೆ ಪ್ರಕರಣ?: ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿರುವ ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರ ಲಿ.ನ ವಂಚನೆಯು 2021ರಲ್ಲಿ ಬೆಳಕಿಗೆ ಬಂದಿತ್ತು. ನೂರಾರು ಗ್ರಾಹಕರು ಹೆಚ್ಚಿನ ಬಡ್ಡಿ ಆಮಿಷ ಕ್ಕೊಳಗಾಗಿ ಇಲ್ಲಿ ಹೂಡಿಕೆ ಮಾಡಿ ವಂಚನೆ ಗೊಳಗಾಗಿದ್ದರು. 2021ರ ಆಗಸ್ಟ್‌ನಲ್ಲಿ ಹನು ಮಂತನಗರ ಠಾಣೆಯಲ್ಲಿದ್ದ ಕೇಸ್ ಸಿಐಡಿಗೆ ವರ್ಗಾವಣೆಯಾಗಿತ್ತು. ಇನ್ನು ಬ್ಯಾಂಕ್ ಅವ್ಯವ ಹಾರದ ತನಿಖೆಯನ್ನು ಸಿಬಿಐಗೆ ವಹಿಸಿ ರಾಜ್ಯ ಸರ್ಕಾರವು 2023 ಡಿಸೆಂಬರ್‌ನಲ್ಲೇ ಆದೇಶಿಸಿತ್ತು. ಆದರೆ, ಸಿಬಿಐ ಮಾತ್ರ ಈ ವಂಚನೆಯ ತನಿಖೆಗೆ ಆಸಕ್ತಿ ವಹಿಸಿಲ್ಲ. ಹೀಗಾಗಿ ಕಳೆದ 3 ವರ್ಷಗಳಿಂದ ಸಿಐಡಿ ಪೊಲೀಸರೇ ತನಿಖೆ ನಡೆಸುತ್ತಿದ್ದಾರೆ.
ಠೇವಣಿದಾರರಿಗೆ ದುಡ್ಡು ವಾಪಸ್ ಯಾವಾಗ?: ವಸಿಷ್ಠ ಬ್ಯಾಂಕ್‌ನಲ್ಲಿ 50 ಸಾವಿರ ರೂ. ನಿಂದ ಕೋಟಿಗೂ ಅಧಿಕ ಹಣವನ್ನು ಹೂಡಿಕೆ ಮಾಡಿ ವಂಚನೆಗೊಳಗಾದವರು ಅಸಲು ದುಡ್ಡು ಸಿಕ್ಕಿದರೆ ಸಾಕು ಎಂಬ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸಿಐಡಿ ಪೊಲೀಸರು ಮುಟ್ಟುಗೋಲು ಹಾಕುವ ಆಸ್ತಿಗಳನ್ನು ಸರ್ಕಾರವು ಠೇವಣಿದಾರರಿಗೆ ಹಿಂದಿರುಗಿಸಲು ಚಿಂತಿಸಿದೆ. ಆದರೆ, ಈ ಪ್ರಕ್ರಿಯೆಗೆ ಸಾಕಷ್ಟು ವರ್ಷಗಳೇ ಉರುಳಲಿವೆ ಎಂದು ಮೂಲಗಳು ತಿಳಿಸಿವೆ.
ಶ್ರೀ ವಸಿಷ್ಟ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿ. ವಂಚನೆ ಪ್ರಕರಣವನ್ನು ಸಿಐಡಿ ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ವಂಚನೆ ಎಸಗಿರುವ ಕುರಿತು ಸಾಕ್ಷ್ಯಗಳನ್ನು ಕಲೆ ಹಾಕಲಾಗುತ್ತಿದೆ. –ಡಾ.ಎಂ.ಎ.ಸಲೀಂ, ಪೊಲೀಸ್ ಮಹಾನಿರ್ದೇಶಕರು, ಸಿಐಡಿ.