Advertisement

ಖರೀದಿ ಅಕ್ರಮ ಎಸಿಬಿ ಮೂಲಕ ತನಿಖೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

02:33 AM Dec 03, 2021 | Team Udayavani |

ಉಡುಪಿ: ಸರಕಾರಿ ಹಾಸ್ಟೆಲ್‌ಗ‌ಳಿಗೆ ಕಳಪೆ ಗುಣಮಟ್ಟದ ಆಹಾರ ಸಾಮಗ್ರಿ ಪೂರೈಕೆ ಮಾಡುತ್ತಿರುವವರ ವಿರುದ್ಧ ರಾಜ್ಯ ಮಟ್ಟದಲ್ಲಿ ಎಸಿಬಿ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತುಮಕೂರು ಸಹಿತವಾಗಿ ರಾಜ್ಯದ ಎಲ್ಲ ಕಡೆಯೂ ಈ ಅಕ್ರಮದ ವಿರುದ್ಧ ಎಸಿಬಿ ಮೂಲಕ ತನಿಖೆ ಮಾಡಿಸಲು ಮುಖ್ಯಮಂತ್ರಿ ಯವರೊಂದಿಗೆ ಮಾತನಾಡಿದ್ದೇನೆ. ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧವೂ ಕಠಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಎಲ್ಲ ಜಿಲ್ಲಾಧಿಕಾರಿಗಳ ನೇತೃತ್ವದಲ್ಲೇ ಖರೀದಿ ಸಮಿತಿ ಇರುತ್ತದೆ. ಪಾರದರ್ಶಕವಾಗಿ ತನಿಖೆ ನಡೆಸಿ, ನಿರ್ದಾಕ್ಷಿಣ್ಯ ಕ್ರಮ ತೆಗೆದು ಕೊಳ್ಳಲಿದ್ದೇವೆ ಎಂದರು.

ಮೊಟ್ಟೆ / ಬಾಳೆ ಹಣ್ಣು:ವಿತರಣೆ ಯಥಾಪ್ರಕಾರ
ಶಾಲಾ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡುವ ತೀರ್ಮಾನದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಹಾಗೆಯೆ ಸರಕಾರಿ ಹಾಸ್ಟೆಲ್‌ಗ‌ಳಲ್ಲಿ ಮೊಟ್ಟೆ ನೀಡುವ ವ್ಯವಸ್ಥೆ ಯಥಾಪ್ರಕಾರ ಮುಂದುವರಿಯಲಿದೆ ಎಂದು ಹೇಳಿದರು.
ಜಿಲ್ಲೆಯ ಕೊರಗ ಸಮುದಾಯದ ಜಮೀನು ವಿಚಾರವಾಗಿ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ನ್ಯಾಯಕೊಡಿಸುವ ಪ್ರಯತ್ನ ಮಾಡಲಿದ್ದೇನೆ. ಭೂ ರಹಿತರ ಸರ್ವೆ ರಾಜ್ಯದಲ್ಲಿ ನಡೆಯುತ್ತಿದೆ ಎಂದು ವಿವರ ನೀಡಿದರು.

ಇದನ್ನೂ ಓದಿ:ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಪರಿಷತ್‌ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು, ಉಭಯ ಜಿಲ್ಲೆಗಳಲ್ಲಿ ಬಿಜೆಪಿಯ 12 ಶಾಸಕರಿದ್ದಾರೆ. ಬಿಜೆಪಿಯ ಅಭ್ಯರ್ಥಿ ಸ್ಪಷ್ಟವಾಗಿ ಅತ್ಯಂತ ಹೆಚ್ಚು ಬಹುಮತದಿಂದ ಜಯ ಸಾಧಿಸಲಿದ್ದಾರೆ. ಬಿಜೆಪಿ ಉಭಯ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಪಕ್ಷದ ಬೆಂಬಲಿತ ಮತದಾರರಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ಮಾತ್ರ ಹಾಕಲು
ಸೂಚನೆ ನೀಡಿದ್ದಾರೆ. ಹೀಗಾಗಿ ಯಾವುದೇ ಒಪ್ಪಂದ ಅಥವಾ ಇನ್ನೇನೂ ನಡೆದಿಲ್ಲ. ಬಿಜೆಪಿ ಅಭ್ಯರ್ಥಿ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next