ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡ ಚಿತ್ರ ಪುರುಷೋತ್ತಮನ ಪ್ರಸಂಗ ಮಾರ್ಚ್ 1 ರಂದು ತೆರೆಕಾಣುತ್ತಿದೆ. ಈ ಚಿತ್ರವನ್ನು ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ನಿರ್ಮಿಸಿದ್ದಾರೆ.
ಇತ್ತೀಚಿಗೆ ಈ ಚಿತ್ರದ “ಅಚ್ಚುಮೆಚ್ಚು ನಿನ್ನ ಕಂಡರೆ…’ ಎಂಬ ಸುಂದರ ಯುಗಳಗೀತೆ ಬಿಡುಗಡೆಯಾಗಿದೆ. ಸಾಹಿತಿ ಜಯಂತ್ ಕಾಯ್ಕಿಣಿ ಈ ಹಾಡನ್ನು ರಚಿಸಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನೀಡಿ, ತಾವೇ ಹಾಡಿದ್ದಾರೆ. ಈ ಗೀತೆಗೆ ಈಗ ಪ್ರಶಂಸೆಯ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಇಂದು ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದೆ.
ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಈ ಚಿತ್ರದ ನಾಯಕನಾಗಿ ಅಜಯ್ ಅಭಿನಯಿದ್ದಾರೆ. ರಿಷಿಕಾ ನಾಯ್ಕ್ ಮತ್ತು ದೀಪಿಕಾ ಪುರುಷೋತ್ತಮನ ಪ್ರಸಂಗ ಚಿತ್ರದ ನಾಯಕಿಯರು.
ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ ಹಾಗೂ ಇತರರು ತಾರಾಬಳಗದಲ್ಲಿದ್ದಾರೆ.
ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಕಾಪಿಕಾಡ್ ಈ ಚಿತ್ರದ ಸಹ ನಿರ್ದೇಶಕರು.