Advertisement

ಪಶ್ಚಿಮ ಘಟ್ಟ ವಾಸಿಗಳನ್ನೆಲ್ಲ ಸಮುದ್ರಕ್ಕೆ ತಳ್ಳಿ:ಕಾಗೋಡು

03:50 AM Mar 04, 2017 | Team Udayavani |

ಶಿವಮೊಗ್ಗ: “ಪಶ್ಚಿಮಘಟ್ಟಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್‌ ವರದಿ ಜಾರಿಮಾಡುವುದಾದರೆ ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಜನರನ್ನು ಮೊದಲು ಸಮುದ್ರಕ್ಕೆ ತಳ್ಳಿ’ ಎಂದು ಕಸ್ತೂರಿ ರಂಗನ್‌ ವರದಿ ವಿರುದ್ಧ ಸಚಿವ ಕಾಗೋಡು ತಿಮ್ಮಪ್ಪ ಕಿಡಿ ಕಾಡಿದ್ದಾರೆ.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮಘಟ್ಟದಲ್ಲಿ  ಪ್ರಾಣಿ, ಪಕ್ಷಿ, ಮರಗಳಂತೆ ಮನುಷ್ಯನಿಗೂ ಜೀವನ ನಡೆಸಲು ಅವಕಾಶವಿರಬೇಕು. ಮೊದಲು ಮನುಷ್ಯರು ಬದುಕಲು ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.

ಕಸ್ತೂರಿ ರಂಗನ್‌ ವರದಿ ಅನುಷ್ಠಾನಗೊಳಿಸಲು ಬಿಡುವುದಿಲ್ಲ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಕಾಗೋಡು ತಿಮ್ಮಪ್ಪ ಎಚ್ಚರಿಕೆ ನೀಡಿದರು.

ಡಾ| ಕಸ್ತೂರಿ ರಂಗನ್‌ ಅಧ್ಯಕ್ಷತೆಯ ಸಮಿತಿ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಗೆ ಪಶ್ಚಿಮ ಘಟ್ಟದ ಜೀವ ವೈವಿಧ್ಯತೆ ಸಂರಕ್ಷಣೆ ಬಗ್ಗೆ ನೀಡಿರುವ ವರದಿ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ 470 ಗ್ರಾಮಗಳನ್ನು ಇಕೋ ಸೆನ್ಸಿÕಟಿವ್‌ ಏರಿಯಾ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next