Advertisement

ಇಂದು ಪುಷ್ಕರ್‌ ಧಮಿ ಪದಗ್ರಹಣ; ಉತ್ತರಾಖಾಂಡ ಸಿಎಂ ಆಗಿ 2ನೇ ಬಾರಿಗೆ ಪ್ರಮಾಣ

01:50 AM Mar 23, 2022 | Team Udayavani |

ಡೆಹ್ರಾಡೂನ್‌/ಪಣಜಿ: ಉತ್ತರಾಖಂಡದ ಬಿಜೆಪಿ ನಾಯಕ ಪುಷ್ಕರ್‌ ಸಿಂಗ್‌ ಧಮಿ ಅವರು ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಬುಧ ವಾರ (ಮಾ. 24) ಪ್ರಮಾಣ ವಚನ ಸ್ವೀಕರಿ ಸಲಿದ್ದಾರೆ.

Advertisement

ಡೆಹ್ರಾಡೂನ್‌ನ ಪರೇಡ್‌ ಗ್ರೌಂಡ್‌ನ‌ಲ್ಲಿ ಮಧ್ಯಾಹ್ನ 2:30ಕ್ಕೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾ ಲರಿಂದ ಧಮಿ ಅವರು ಪ್ರಮಾಣ ಸ್ವೀಕರಿಸಲಿ ದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಎಂದು ರಾಜ್ಯದ ಬಿಜೆಪಿ ಉಸ್ತುವಾರಿ ಹೊಂದಿರುವ ಮನ್ವೀರ್‌ ಸಿಂಗ್‌ ಚೌಹಾನ್‌ ತಿಳಿಸಿದ್ದಾರೆ.

ಮೋದಿಯವರ ಜೊತೆಗೆ, ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್‌ ಭಾಗವಹಿಸಲಿದ್ದಾರೆ. ಇದೇ ವೇಳೆ, ಮಂಗಳವಾರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಧಮಿ, ನೂತನ ಬಿಜೆಪಿ ಸರಕಾರ‌ದಡಿ ಏಕರೂಪ ನಾಗರಿಕ ಸಂಹಿತೆಯನ್ನು ಸೇರಿದಂತೆ ಅನೇಕ ಪ್ರಮುಖ ನಿರ್ಧಾರಗಳನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ನಾವೂ ಹಿಂದೂಗಳೇ, ಭಗವದ್ಗೀತೆ ಬಗ್ಗೆ ಹೊಟ್ಟೆ ಉರಿ ಇಲ್ಲ: ಡಿಕೆಶಿ

28ಕ್ಕೆ ಸಾವಂತ್‌ ಪ್ರಮಾಣ
ಗೋವಾದ ಮುಖ್ಯಮಂತ್ರಿಯಾಗಿ ನಿಯೋಜಿತಗೊಂಡಿರುವ ಪ್ರಮೋದ್‌ ಸಾವಂತ್‌, ಮಾ. 28ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಣಜಿಯ ಡಾ. ಶ್ಯಾಮ ಪ್ರಸಾದ್‌ ಮುಖರ್ಜಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪಕ್ಷದ ಇತರ ನಾಯಕರಾದ ಜೆ.ಪಿ. ನಡ್ಡಾ, ನಿತಿನ್‌ ಗಡ್ಕರಿ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ ಗಳು ಭಾಗವಹಿಸುವ ನಿರೀಕ್ಷೆಯಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next