Advertisement

ಮೌಲ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿ

09:14 PM Aug 02, 2019 | Team Udayavani |

ಮೈಸೂರು: ಉತ್ತಮ ಸಮಾಜ ಕಟ್ಟುವಲ್ಲಿ ವಕೀಲರ ಪಾತ್ರವು ಪ್ರಮುಖವಾಗಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಈಶ್ವರ್‌ ಭಟ್‌ ಸಲಹೆ ನೀಡಿದರು. ಕುವೆಂಪುನಗರದಲ್ಲಿರುವ ಜೆಎಸ್‌ಎಸ್‌ ಕಾನೂನು ಕಾಲೇಜಿನ ರಜತ ಮಹೊತ್ಸವ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

ನ್ಯಾಯ ಕೇಳಿ ಬರುವ ಜನರಿಗೆ ನ್ಯಾಯ ದೊರಕಿಸಿಕೊಟ್ಟು ನಂಬಿಕೆ ಉಳಿಸಿಕೊಳ್ಳಬೇಕು. ಹಣಕ್ಕಾಗಿ ಕಾರ್ಯನಿರ್ವಹಿಸದೆ ಮೌಲ್ಯಗಳಿಗೆ ಪ್ರಾಮುಖ್ಯತೆ ನೀಡಬೇಕು. ಎಂಜಿನಿಯರ್‌ಗಳು ಯಾವ ರೀತಿ ಸುಂದರ ಕಟ್ಟಡವನ್ನು ನಿರ್ಮಿಸುವರೋ ಹಾಗೇ, ಸದೃಢ ಸಮಾಜ ನಿರ್ಮಾಣಕ್ಕೆ ವಕೀಲರು ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.

ಕಾನೂನು ವಿದ್ಯಾರ್ಥಿಗಳು ಮತ್ತು ವಕೀಲರು ಕಾನೂನು ಶಾಸ್ತ್ರದಲ್ಲಿ ಸಾಮಾಜಿಕ, ರಾಜಕೀಯ ಹಾಗೂ ಅರ್ಥಿಕ ವಿಷಯಗಳನ್ನು ಹೆಚ್ಚು ತಿಳಿಯಬೇಕು. ಅಲ್ಲದೇ, ಪ್ರಾದೇಶಿಕ ಭಾಷೆಯಲ್ಲಿನ ಸೂಕ್ಷ್ಮತೆ ಅರಿಯುವುದರ ಜೊತೆಗೆ ರಾಷ್ಟ್ರೀಯ ಭಾಷೆಯನ್ನು ಕಲಿಯಬೇಕು. ಇದರಿಂದ ಕಾನೂನಿನ ಬಗ್ಗೆ ವ್ಯಾಪಕವಾದ ಮಾಹಿತಿ ದೊರೆಯುತ್ತದೆ ಎಂದು ಸಲಹೆ ನೀಡಿದರು.

ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಎ.ವಿ.ಚಂದ್ರಶೇಖರ್‌ ಮಾತನಾಡಿ, ಕಾನೂನು ನಿಂತಿರುವುದೇ ಸಂವಿಧಾನದ ಮೇಲೆ. ಆದ್ದರಿಂದ ಕಾನೂನು ಸೇವೆ ಮಾಡಲು ಇಚ್ಛಿಸುವವರು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸೇವೆ ಸಲ್ಲಿಸಬೇಕು. ಸಂವಿಧಾನದ ಆಶಯಗಳನ್ನು ತಿಳಿಯಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯಕಾರ್ಯನಿರ್ವಾಹಕ ಪ್ರೊ.ಕೆ.ಎಸ್‌.ಸುರೇಶ್‌, ಪ್ರಾಂಶುಪಾಲ ಡಾ.ಎಸ್‌.ನಟರಾಜು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next