ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಪಂ ಸಹಯೋಗದೊಂದಿಗೆ ಹಲವು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಅಧಿಕಾರಿಗಳು ಕಾಳಜಿ ವಹಿಸಿ ಕೆಲಸ ಮಾಡುವ ಮೂಲಕ ಜಿಲ್ಲೆಯಲ್ಲಿ ಪರಿಸರ ಆಂದೋಲನಕ್ಕೆ ನಾಂದಿಯಾಡ ಬೇಕೆಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ ದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ದ ಅವರು, ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯ ವೃದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ವಿಶೇಷ ವಾಗಿ ಗ್ರಾಪಂಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಬಳಸಿಕೊಂಡು ಪರಿಸರ ಸಂರಕ್ಷಣೆಗೆ ಒತ್ತು ಕೊಡಬೇಕೆಂದರು.
ಪರಿಸರ ದಿನದಂದು ಸಾಮೂಹಿಕವಾಗಿ ಗಿಡ ನೆಡುವ ಕಾರ್ಯ ಆಗಬೇಕೆಂದರು. ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ಪರಿಸರ ಸಂರ ಕ್ಷಣಾ ಕಾರ್ಯಕ್ರಮಗಳಿಗೆ ಜಿಲ್ಲೆಯ ಎನ್‌ಎಸ್‌ಎಸ್, ಎನ್‌ಸಿಸಿ ಸ್ಕೌಟ್ ಗೈಡ್ಸ್ ತಂಡದ ವಿದ್ಯಾರ್ಥಿಗಳನ್ನು ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲಾ ಕಾಲೇಜು, ಗುಂಡು ತೋಪು, ಸಾರ್ವಜನಿಕ ಸ್ಥಳ ಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳ ಆವರಣ ದಲ್ಲಿ ಗಿಡ ನೆಡಲು ತಾಲೂಕು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು ಸ್ಥಗಳನ್ನು ಗುರುತಿಸಿ ಎಷ್ಟು ಸಸಿಗಳು ಬೇಕು ಎಂಬುದರ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಜಿಪಂ ಸಿಇಒ ಬಿ.ಫೌಝೀಯಾ ತರು ನ್ನುಮ್, ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿ ಕಾರಿ ಆರತಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.