ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾಹಿತಿ ದೃಢಪಡಿಸಿರುವ ಮಠದ ಮೂಲಗಳು ಸದ್ಯ ಸ್ವಾಮೀಜಿಗಳು ಮಣಿಪಾಲದ ಕೆಎಂಸಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ: ಕೋರ್ಟ್ ಎರಡು ದಿನ ಸೀಲ್ ಡೌನ್
ಪುತ್ತಿಗೆ ಶ್ರೀಗಳು 15 ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ಆಗಮಿಸಿದ ಶ್ರೀಗಳಿಗೆ ಕೆಲ ದಿನಗಳಿಂದ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಹೀಗಾಗಿ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇದನ್ನೂ ಓದಿ: ಕೋವಿಡ್ ಕಳವಳ ಜು.21: ರಾಜ್ಯದಲ್ಲಿ 3649 ಹೊಸ ಪ್ರಕರಣಗಳು ; 61 ಸಾವು, 1664 ಚೇತರಿಕೆ