Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ಬಗ್ಗೆ ದನಿ ಎತ್ತಿದ್ದು ನಾನು. ನನ್ನ ಒಂದೂ ಪ್ರಶ್ನೆಗೂ ಸರಕಾರ ಇಲ್ಲಿವರೆಗೆ ಉತ್ತರ ನೀಡಿಲ್ಲದಿರುವುದೇ ಸರಕಾರದ ವೈಫಲ್ಯಕ್ಕೆ ಸಾಕ್ಷಿ ಎಂದರು.
ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ. ಇಲ್ಲಿ ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆಯೇ ಇಲ್ಲ. ಮಕ್ಕಳ ಭವಿಷ್ಯದ ಬಸ್ ಎಲ್ಲಿದೆ? ಇದು ಈ ಸರಕಾರ ನುಡಿದಂತೆ ನಡೆದಿರುವುದಾ? ಮಕ್ಕಳು ಜೆಸಿಬಿಯಲ್ಲಿ ಶಾಲೆಗೆ ಹೋಗುತ್ತಿದ್ದಾರೆ. ಇವರು ನಿತ್ಯ ಕಲರ್‌ಫುಲ್ ಫೋಟೊ ಪೋಸ್ ಕೊಡುತ್ತಾರೆ. ಸರಕಾರದ ಅಕ್ರಮಗಳ ಪ್ರಶ್ನೆ ಮಾಡಿದರೆ ನನ್ನ ವಿರುದ್ಧ ಪೋಸ್ಟರ್ ಹಾಕುತ್ತಾರೆ ಎಂದು ಕಿಡಿಕಾರಿದರು.
ರಾಜ್ಯಕ್ಕೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆಗಮನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನರ ಕಷ್ಟ ಸುಖ ನೋಡಲು ಬರಲಿಲ್ಲ. ಈಗ ಜನರ ಹಣ ಲೂಟಿ ಮಾಡುವ ನಿಗಮ ಮಂಡಳಿ ನೇಮಕ ಮಾಡಲು ಬರ್ತಿದ್ದಾರಾ. ನಿಗಮ ಮಂಡಳಿ ರಚನೆ ಮಾಡಿ ಜನರ ಕಷ್ಟ ಕೇಳುತ್ತೀರಾ? ಸಿಎಂ ಕ್ಷೇತ್ರದಲ್ಲಿ 2.5 ಲಕ್ಷಕ್ಕೆ ಯಾವುದೋ ಖಾಸಗಿ ಕಂಪನಿ ವಿರುದ್ಧ ಅರ್ಜಿ ಹಿಡಿದುಕೊಂಡು ನಿಂತಿದ್ದಾರೆ. ಸಿಎಂ ಮನೆ ನವೀಕರಣ ಮಾಡಲು ಕೋಟ್ಯಂತರ ಹಣ ಖರ್ಚು ಮಾಡುತ್ತಿದ್ದೀರಿ ಎಂದು ಕಿಡಿಕಾರಿದರು. ಪೋಸ್ಟರ್ ಪಾಲಿಟಿಕ್ಸ್‌ಗೆ ಕಡಿವಾಣ ಬೀಳದಿದ್ದರೆ ಮಾರಾಮಾರಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ಪಾಲಿಟಿಕ್ಸ್ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಕೆಂಡಕಾರಿರುವ ಜೆಡಿಎಸ್, ಇದಕ್ಕೆ ಪೊಲೀಸರು ಕಡಿವಾಣ ಹಾಕದಿದ್ದರೆ ಹಾದಿಬೀದಿಯಲ್ಲಿ ಮಾರಾಮಾರಿ ಆಗುತ್ತದೆ ಎಂದು ನೇರ ಎಚ್ಚರಿಕೆ ಕೊಟ್ಟಿದೆ.
Related Articles
Advertisement
ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಪೋಸ್ಟರ್ ಪಾಲಿಟಿಕ್ಸ್ ಮಾಡುತ್ತಿದ್ದು, ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತತ್‌ಕ್ಷಣ ಅದನ್ನು ತಡೆಯದಿದ್ದರೆ ನಾವೂ ಅದೇ ದಾರಿ ತುಳಿಯಬೇಕಾಗುತ್ತದೆ. ಕಾಂಗ್ರೆಸ್ ಪಕ್ಷ ಇತ್ತೀಚಿನ ದಿನಗಳಲ್ಲಿ ಪೋಸ್ಟರ್ ಪಾಲಿಟಿಕ್ಸ್ ಮೂಲಕ ಅಪಪ್ರಚಾರ ಮಾಡಿ ತೇಜೋವಧೆ ಮಾಡುತ್ತಿದೆ. ಪೊಲೀಸ್ ಇಲಾಖೆ ಕಡಿವಾಣ ಹಾಕದಿದ್ದರೆ ಹಾದಿಬೀದಿಯಲ್ಲಿ ಮಾರಾಮಾರಿ ಆಗುತ್ತದೆ. ಅಂತಹ ಪರಿಸ್ಥಿತಿ ಬಂದರೆ ಅದಕ್ಕೆ ಪೊಲೀಸರು ಮತ್ತು ಸರಕಾರವೇ ನೇರ ಹೊಣೆ ಎಂದು ಎ. ಮಂಜುನಾಥ್ ಎಚ್ಚರಿಕೆ ನೀಡಿದರು.
ಕಾಂಗ್ರೆಸ್‌ನ ಎಲ್ಲ ನಾಯಕರು ಇದರಲ್ಲಿ ಭಾಗಿಯಾಗಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಅವರ ಹಿಂಬಾಲಕರು ಇದನ್ನು ಮಾಡುತ್ತಿದ್ದಾರೆ. ಗೃಹ ಇಲಾಖೆ ಕಡಿವಾಣ ಹಾಕಲಿಲ್ಲ ಅಂದರೆ ಇದಕ್ಕಿಂತ ವಿಚಿತ್ರವಾಗಿ ಪೋಸ್ಟರ್ ಚಳವಳಿ ನಡೆಯುತ್ತದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ತಿಳಿಸುವ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಮಾಡಿದ್ದೆಲ್ಲ ಸರಿಯಾಗಿದ್ದರೆ ಈ ರೀತಿ ಪೋಸ್ಟರ್ ಅಂಟಿಸುವ ಕೆಲಸ ಮಾಡುತ್ತಿರಲಿಲ್ಲ. ಪುಂಡರನ್ನ ಫುಡಾರಿಗಳನ್ನ ಇಟ್ಟುಕೊಂಡು ಪೋಸ್ಟರ್ ಅಂಟಿಸಿದರೆ ಸರಿ ಇರಲ್ಲ ಎಂದು ಅವರು ಎಚ್ಚರಿಕೆ ನೀಡಿದರು.