Advertisement
ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಅಭಿವೃದ್ಧಿಗೆ ಸಂಬಂಧಿಸಿ ಕೆಲಸ ಕಾರ್ಯಗಳಿಗೆ ಮುಂದಡಿ ಇಡಲಾಗಿದೆ. ದೇವಸ್ಥಾನದ ಸುತ್ತ ಮುತ್ತಲಿರುವ ಅನಾದಿ ಕಾಲದ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ.
ಕೇಂದ್ರ ಪ್ರವಾಸೋದ್ಯಮ ಇಲಾಖೆಯ ‘ಪ್ರಷಾದ್’ ಯೋಜನೆಯಡಿ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಶಾಸಕರು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಇಲಾಖೆಗೆ ಅ. 25 ರಂದು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಇದೇ ಪ್ರಸ್ತಾವನೆಯನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಲಾಗಿದೆ. ರಾಜ್ಯ ಸರಕಾರ ಕೂಡಾ ಈ ಯೋಜನೆಯಡಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವನ್ನು ಸೇರಿಸಿ 55 ಕೋ.ರೂ. ಅನುದಾನವನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. ಡಿ. 6 ರಂದು ಈ ಪ್ರಸ್ತಾವನೆಯನ್ನು ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ವಿವರಿಸಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಪ್ರಷಾದ್ ಯೋಜನೆಯಡಿ ಅನುದಾನ ಮಂಜೂರಾದಲ್ಲಿ ಮಹಾದ್ವಾರ, ಘನತ್ಯಾಜ್ಯ ನಿರ್ವಹಣೆ, ದೇಗುಲದ ಕಚೇರಿ, ಮೂಲ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್, ಆವರಣಗೋಡೆ, ಅಡಿಟೋರಿಯಂ ಕಲಾಗ್ರಾಮ, ಯಾತ್ರಿ ನಿವಾಸ್, ಹೊಸ ವಿನ್ಯಾಸದ ಬೆಳಕಿನ ವ್ಯವಸ್ಥೆ, ಮತ್ತು ಲ್ಯಾಂಡ್ ಸ್ಕೇಪ್ ಇಲ್ಲಿ ನಿರ್ಮಾಣವಾಗಲಿದೆ ಎಂದವರು ಹೇಳಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡುವಂತೆ ಸಂಸದ ಬ್ರಿಜೇಶ್ ಚೌಟ ಅವರಿಗೆ ಮನವಿ ಮಾಡಲಾಗುತ್ತಿದೆ ಎಂದರು.
Related Articles
– ಅಶೋಕ್ ರೈ, ಶಾಸಕರು
Advertisement