Advertisement

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾನ ಹಾನಿಕಾರಕರ ಸಂದೇಶ, ವ್ಯಕ್ತಿ ಪೊಲೀಸ್ ವಶಕ್ಕೆ

07:28 PM Oct 29, 2022 | Team Udayavani |

ಪುತ್ತೂರು : ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ ಪಿ. ಭಟ್‌ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಸಂದೇಶ ರವಾನಿಸಿದ ವ್ಯಕ್ತಿಯನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.

Advertisement

ಫೇಸ್‌ಬುಕ್‌ನಲ್ಲಿ ಮಾನಹಾನಿಕರ ಪೋಸ್ಟ್‌ ಹಾಕಿದ ವ್ಯಕ್ತಿಯ ಕುರಿತು ವೀಣಾ ಪಿ. ಭಟ್‌ ಅವರು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಭಾಸ್ಕರ ಮಣಿಯಾಣಿ ಎಂಬಾತ ವೀಣಾ ಭಟ್‌ ಅವರ ಬಗ್ಗೆ ಆಕ್ಷೇಪಾರ್ಹ ಅಶ್ಲೀಲ ಮತ್ತು ಮಾನಹಾನಿಕರ ಕಾಮೆಂಟ್‌ ಅನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದ. ಈ ಬಗ್ಗೆ ಪೊಲಿಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಾಕಿರುವ ಕಾಮೆಂಟ್‌ ಅನ್ನು ಅಳಿಸಿ ಹಾಕಿಸಿದ್ದಾರೆ.

ಬಳಿಕ ಆರೋಪಿಯನ್ನು ದೂರುದಾರರ ಸಮಕ್ಷಮ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದು, ಕ್ಷಮೆ ಕೇಳಿದ ಬಳಿಕ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ.

ಇದನ್ನೂ ಓದಿ : ತುಂಗಭದ್ರಾ ಎಡದಂಡೆ ಕಾಲುವೆಯ ಕೆರೆ ಕಟ್ಟೆ ಗೆ ಕಾರು ಢಿಕ್ಕಿ: ಅಭದ್ರತೆಯಲ್ಲಿ ಮಿನಿಡ್ಯಾಂ

Advertisement

Udayavani is now on Telegram. Click here to join our channel and stay updated with the latest news.

Next