Advertisement

Puttur: ಆಂಬ್ಯುಲೆನ್ಸ್-ಪಿಕಪ್ ನಡುವೆ ಢಿಕ್ಕಿ: ಹಸುಳೆಗೆ ಗಾಯ

09:04 PM Sep 23, 2024 | Team Udayavani |

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ಆಂಬುಲೆನ್ಸ್ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿದ ಘಟನೆ ಸೋಮವಾರ (ಸೆ.23) ರಂದು ರಾತ್ರಿ ಸಂಭವಿಸಿದೆ.

Advertisement

ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವಿಗೆ ಬೆಳವಣಿಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ ನಲ್ಲಿದ್ದ ಹಸುಳೆ ಮತ್ತು ಚಾಲಕನಿಗೆ ಗಾಯವಾಗಿದೆ. ಗಾಯಾಳು ಹಸುಳೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬದಲಿ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ಕೊಂಡೊಯ್ಯಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next