Advertisement

Puttur: ಹೃದಯಾಘಾತದಿಂದ ತಾಲೂಕು ಕಚೇರಿಯ ಚುನಾವಣಾ ಶಾಖೆಯ ಉದ್ಯೋಗಿ ನಿಧನ

09:34 AM Sep 26, 2024 | Team Udayavani |

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಹೃದಯಾಘಾತದಿಂದ ನಿಧನ ಹೊಂದಿದರು.

Advertisement

ಸೆ.25ರ ಬುಧವಾರ ರಾತ್ರಿ ಸುಮಾರು ರಾತ್ರಿ 9.40ರ ವೇಳೆ ಕನಕರಾಜ್ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರಿನ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.‌ ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next