Advertisement

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

08:33 PM Sep 28, 2024 | Team Udayavani |

ಪುತ್ತೂರು: ಪುತ್ತೂರು ನಗರದ ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Advertisement

ಆರಂಭದಲ್ಲಿ ಜೆಡಿಎಸ್‌, ಪ್ರಸ್ತುತ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ ಬರಹದ ಮೂಲಕ ಸುದ್ದಿಯಲ್ಲಿದ್ದ ಬಪ್ಪಳಿಗೆ ನಿವಾಸಿ ಅದ್ದು ಪಡೀಲ್‌ ಅವರು ಮಸೀದಿ ಸನಿಹದಲ್ಲಿ ವೀಡಿಯೋ ಕರೆ ಮೂಲಕ ನಗ್ನ ಸ್ಥಿತಿಯಲ್ಲಿದ್ದ ಮಹಿಳೆಯೊಂದಿಗೆ ಮಾತನಾಡುತ್ತಾ ಅಶ್ಲೀಲವಾಗಿ ವರ್ತಿಸಿದ್ದಾರೆ ಎನ್ನಲಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಆದರೆ ಆ ವೀಡಿಯೋ ತನ್ನದಲ್ಲ. ವಿರೋಧಿ ಗುಂಪು ನಕಲಿ ವೀಡಿಯೋ ತಯಾರಿಸಿ ಹಂಚಿದೆ ಎಂದು ಅದ್ದು ಪಡೀಲು ಸಾಮಾಜಿಕ ಜಾಲತಾಣದಲ್ಲಿ ಉತ್ತರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next