Advertisement
ಮುಂಡೂರಿನಲ್ಲಿ ನಡೆದಿದ್ದ ಒತ್ತೆಕೋಲದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದಾಗ ಅಪಘಾತ ಸಂಭವಿಸಿದೆ. ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಸಾಗುತ್ತಿದ್ದಾಗ ಸೇಡಿಯಾಪು ಜಂಕ್ಷನ್ನಿಂದ 250 ಮೀ. ದೂರದ ಕಾವು ಎಂಬಲ್ಲಿ ಎಡ ಬದಿಗೆ ಚಲಿಸಿ ತೋಟದ ನೀರು ಹರಿಯುವ ಕಾಲುವೆಗೆ ಬಿದ್ದಿತು. ಕಾರು ಕಾಲುವೆ ಒಳಗೆ ಸಿಲುಕಿದ್ದು, ಚಾಲಕನ ಬದಿಯ ಬಾಗಿಲು ಮೇಲ್ಮುಖವಾಗಿತ್ತು. ಮತ್ತೂಂದು ಬದಿ ಮಣ್ಣಿನಡಿಗೆ ಬಿದ್ದಿತ್ತು. ಬೆಳ್ತಂಗಡಿ ತಾಲೂಕಿನ ಉಜಿರೆಯ ಪಾರ ನಿವಾಸಿ ಚರಣ್ ಅವರು ಕಾರನ್ನು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಕಾರು 10 ಅಡಿ ಆಳಕ್ಕೆ ಬಿದ್ದ ಕೂಡಲೇ ಚರಣ್ನ ಅಕ್ಕನ ಮಗ, 5ನೇ ತರಗತಿ ವಿದ್ಯಾರ್ಥಿ ವನೀಶ್ ಕಷ್ಟಪಟ್ಟು ಕಾರಿನ ಬಾಗಿಲು ತೆಗೆದು ಹೊರ ಬಂದ. ಉಳಿದವರು ಹೊರ ಬರಲು ಪ್ರಯಾಸ ಪಟ್ಟರೂ ಸಾಧ್ಯವಾಗಲಿಲ್ಲ. ಈತನೂ ಬಾಗಿಲು ತೆಗೆಯಲು ಪ್ರಯತ್ನಿಸಿ ವಿಫಲನಾದ. ಬಳಿಕ ಕೂಡಲೇ ಕಂದಕದಿಂದ ಮೇಲೆ ಬಂದು ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನವನ್ನು ನಿಲ್ಲಿಸಿ ಅವರ ಸಹಾಯಕ್ಕೆ ಕರೆದ. ಇವರ ಸಹಾಯದಿಂದ ಎಲ್ಲರೂ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಐವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.